Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಗೆಲುವಿನ ನಾಗಾಲೋಟ ಬಹಳ ದಿನ ನಡೆಯದು: ಬಿವೈವಿ
  • Bangalore
  • Politics
  • State

ಕಾಂಗ್ರೆಸ್ ಗೆಲುವಿನ ನಾಗಾಲೋಟ ಬಹಳ ದಿನ ನಡೆಯದು: ಬಿವೈವಿ

Praja Vahini May 19, 2026 1 minute read
WhatsApp Image 2026-05-19 at 13.06.22
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ತುಮಕೂರಿನಲ್ಲಿ ಅದ್ದೂರಿಯಾಗಿ ಮೂರು ವರ್ಷದ ಸಾಧನಾ ಸಮಾವೇಶವನ್ನು ಕೈಗೊಂಡಿದ್ದು ಇದೀಗ ಬಿಜೆಪಿ ರಾಜ್ಯಧ್ಯಕ್ಷರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮುಖ್ಯಮಂತ್ರಿಗಳೇ, ಯಾವ ಪುರುಷಾರ್ಥಕ್ಕೆ ನೀವು ತುಮಕೂರಿನಲ್ಲಿ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದೀರಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಳಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ಮಂಗಳವಾರ ಮೇ 19) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 3 ವರ್ಷಗಳಲ್ಲಿ ತಾವು ಮಾಡಿದ ಸಾಧನೆಯಾದರೂ ಏನು? ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿವೆಯೇ? ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೀರಾ ಎಂದು ಪ್ರಶ್ನಿಸಿದರು.

ನಾಡಿಗೆರಡು ತುತ್ತು ಅನ್ನ ಕೊಡುವ ರೈತರ ಬದುಕನ್ನು ಕಟ್ಟಿಕೊಡುವ ಸಲುವಾಗಿ ನೆರೆ ಮತ್ತು ಬರದ ಸಂದರ್ಭದಲ್ಲಿ ನೆರವಿಗೆ ನಿಮ್ಮ ಸರಕಾರ ಬಂದಿದೆಯೇ ಎಂದು ಕೇಳಿದರು. ಇದ್ಯಾವುದನ್ನೂ ಮಾಡದೇ, ಗ್ಯಾರಂಟಿಗಳ ನೆಪ ಒಡ್ಡಿಕೊಂಡು ರಾಜ್ಯ ಸರಕಾರವು ಜನರ ಪಾಲಿಗೆ ಬದುಕಿದೆ ಎಂಬುದನ್ನು ನೆನಪಿಸುವ ಕಾರ್ಯವನ್ನು ಈ ಸಾಧನಾ ಸಮಾವೇಶದ ಮೂಲಕ ತಾವು ಮಾಡುತ್ತ ಇದ್ದೀರಿ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಸರಕಾರವು ಕೇವಲ ಜಾಹೀರಾತಿನ ಮೂಲಕ ತಮ್ಮ ಯಶಸ್ಸನ್ನು ಬಿಚ್ಚಿಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ನಿಮ್ಮ ಗೆಲುವಿಗೆ ಗ್ಯಾರಂಟಿಗಳು ಸಹಕರಿಸಿವೆ. ಗ್ಯಾರಂಟಿ ಹಣ ಬಿಡುಗಡೆ ಮಾಡಿ ಚುನಾವಣೆ ಗೆಲ್ಲಲು ಪ್ರಯತ್ನ ಮಾಡುತ್ತ ಇದ್ದೀರಿ ಎಂದು ದೂರಿದರು. ಈ ಗೆಲುವಿನ ನಾಗಾಲೋಟ ಬಹಳ ದಿನ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಿಂದೆಯೂ ಕಾಂಗ್ರೆಸ್ ಸರಕಾರವು ಅಸ್ತಿತ್ವದಲ್ಲಿ ಇದ್ದಾಗ ಇದೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ನಂಜನಗೂಡು, ಬೇರೆ ಉಪ ಚುನಾವಣಾ ಫಲಿತಾಂಶ ಏನಾಗಿತ್ತು ಎಂದು ಕೇಳಿದರು. ನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ನಿಮ್ಮನ್ನು ಮನೆಗೆ ಕಳಿಸಿದ್ದನ್ನು ತಾವು ಮರೆತಿಲ್ಲ ಎಂದು ಭಾವಿಸುವುದಾಗಿ ಹೇಳಿದರು.

ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಈ ಸರಕಾರದಿಂದ ಬಳಸುವ ಆಗುತ್ತಿದೆ. ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆಗೆ ಆದ್ಯತೆ ನೀಡಿದ್ದೀರಾ? ನೀರಾವರಿ ಯೋಜನೆಗಳಿಗೆ ಹಣ ಒದಗಿಸಿದ್ದೀರಾ? ಆಸ್ಪತ್ರೆಗಳು, ಶಾಲೆಗಳಿಗೆ ಕಾಂಗ್ರೆಸ್ ಸರಕಾರ ನೀಡಿದೆಯೇ? ಅಭಿವೃದ್ಧಿಯನ್ನು ಕಣ್ಮುಂದೆ ಇಟ್ಟುಕೊಂಡು ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲು ನಿಮಗೆ ಸಾಧ್ಯ ಆಗಿದೆಯೇ ಎಂದು ಕೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಪತ್ನಿ ಉಷಾ ಜೊತೆ ಡಿಕೆಶಿ ಟೆಂಪಲ್ ರನ್
Next: ಕಾಂಗ್ರೆಸ್‌ನವರು ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡ್ತಿದ್ದಾರೆ?: ಬಿವೈವಿ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.