Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ: ಸಿಎಂ
  • Politics
  • State
  • ತುಮಕುರು

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ: ಸಿಎಂ

Praja Vahini May 19, 2026
WhatsApp Image 2026-05-19 at 14.21.24
Spread the love

ತುಮಕೂರು: ನಾವು ಅಧಿಕಾರಕ್ಕೆ ಬಂದ ಬಳಿಕ‌ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ.

ಬಿಜೆಪಿಯವರ ರೀತಿ ಜಾತಿ ಧರ್ಮದದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವ ಕೆಟ್ಟ ರಾಜಕಾರಣ ನಾವು ಮಾಡಲಿಲ್ಲ. ಬಿಜೆಪಿಯವರ ಎಲ್ಲಾ ಅಪಪ್ರಚಾರಗಳನ್ನು ಸುಳ್ಳಾಗಿಸಿ ನಾವು ಅಭಿವೃದ್ಧಿ ಮಾಡಿ ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸರ್ಕಾರಕ್ಕೆ 3 ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, “ಮೂರು ವರ್ಷಗಳ ಸಾಧನಾ ಸಮರ್ಪಣಾ” ಸಮಾವೇಶ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಬಳಿಕ, “ನವ ಕರ್ನಾಟಕ” ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಗೆಲುವಿನ ನಾಗಾಲೋಟ ಬಹಳ ದಿನ ನಡೆಯದು: ಬಿವೈವಿ

ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ ಉಳಿದ ಭರವಸೆಗಳನ್ನೂ ಈಡೇರಿಸಿ ನಾವು ನಿಮ್ಮ ಮುಂದೆ ಧನ್ಯತೆ ಅರ್ಪಿಸಲು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇವೆ ಎಂದರು.

ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು

35 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ.  ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು ಎನ್ನುವುದನ್ನು ಉದಾಹರಣೆ ಸಮೇತ ವಿವರಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್‌ನವರು ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡ್ತಿದ್ದಾರೆ?: ಬಿವೈವಿ
Next: ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ: ಸಿಎಂ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.