ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಇದೀಗ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ದರ ಏರಿಕೆ ಆಗಿರುವುದರಿಂದ ಸಾರ್ವಜನಿಕರ ಜೇಬಿಗೆ ಕತ್ತರಿ ಬಿದ್ದಿದೆ.
ಇನ್ನು ರಾಜ್ಯದಲ್ಲೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗಿರುವುದರಿಂದ ರಾಜ್ಯದಲ್ಲಿ ತೆರಿಗೆಯನ್ನು ಕಡಿತ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು (ಗುರುವಾರ ಮೇ 21) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದರು ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಅಂತ ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂತ ಕೇಳಲ್ಲ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬೆಂಕಿಗೆ ಸುಟ್ಟು ಕರಕಲಾದ ಮನೆ; ಕುಟುಂಬಸ್ಥರ ನೆರವಿಗೆ ನಿಂತ ದಿನೇಶ್ ಗುಂಡೂರಾವ್
ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
