Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂತಿಮ ಗಡುವಿನೊಳಗಾಗಿ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಮಹೇಶ್ವರ್ ರಾವ್
  • Bangalore
  • State

ಅಂತಿಮ ಗಡುವಿನೊಳಗಾಗಿ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಮಹೇಶ್ವರ್ ರಾವ್

Praja Vahini May 21, 2026 1 minute read
WhatsApp Image 2026-05-21 at 17.45.20
Spread the love

ಬೆಂಗಳೂರು: ಹೆಚ್ಚುವರಿ ಸಿಬ್ಬಂದಿಗಳನ್ನು ಹಾಗೂ ಕಾರ್ಮಿಕರನ್ನು ನಿಯೋಜಿಸಿಕೊಂಡು ಅಂತಿಮ ಗಡುವಿನೊಳಗಾಗಿ ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಜೊತೆ ಇಂದು (ಗುರುವಾರ ಮೇ 21) ನಡೆಸಿದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈಜೀಪುರ ಮೇಲ್ಸೇತುವೆಯನ್ನು ನಿಗದಿತ ಗುಡುವಿನೊಳಗಾಗಿ ಪೂರ್ಣಗೊಳಿಸಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಈ ಸಂಬಂಧ ಮಡಿವಾಳ ಕಡೆಯ ಸೈಡ್ ರ‍್ಯಾಂಪ್ ಕಾಮಗಾರಿ ನಡೆಸುವ ಸ್ಥಳದಲ್ಲಿ ಬೆಸ್ಕಾಂನ ಆರ್.ಎಂ.ಯು ಅನ್ನು ನಾಳೆಯೇ ಸ್ಥಳಾಂತರ ಮಾಡಬೇಕು. ಆ ಬಳಿಕ ಕೇಂದ್ರೀಯ ಸದನದ ಎದುರಿರುವ ಮೂರು ಮರಗಳನ್ನು 4 ದಿನಗಳ ಒಳಗಾಗಿ ಕಟಾವು ಮಾಡಿ ರ‍್ಯಾಂಪ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು.

ದೊಮ್ಮಲೂರು ಕಡೆಯ ಡೌನ್ ರ‍್ಯಾಂಪ್ ಕಾಮಗಾರಿ ಶೇ. 70 ರಷ್ಟು ಪೂರ್ಣಗೊಂಡಿದ್ದು, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು 15 ದಿನಗಳ ಒಳಗಾಗಿ ಬಾಕಿ ಡೌನ್ ರ‍್ಯಾಂಪ್ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಅದಾದ ಬಳಿಕ ಸರ್ಜಾಪುರ ಕಡೆಯ ಡೌನ್ ರ‍್ಯಾಂಪ್ ಕಾಮಗಾರಿಯನ್ನು 15 ದಿನಗಳ ಒಳಗಾಗಿ ಕೈಗೆತ್ತಿಕೊಳ್ಳಲು ಸೂಚನೆ ನೀಡಿದರು. ಇದನ್ನೂ ಓದಿ: ದೈವ ನೂರಾದರೂ ಭಕ್ತಿಯೊಂದೆ: ಡಿಕೆಶಿ

ಈಜೀಪುರ ಸಿಗ್ನಲ್ ಕಡೆಯಲ್ಲಿ ಅಳವಡಿಸುತ್ತಿರುವ 4 ಸ್ಪಾನ್ಸ್ ಲಾಂಚಿಂಗ್ ಕಾರ್ಯವನ್ನು ನಿನ್ನೆ ಆರಂಭಿಸಲಾಗಿದ್ದು, 2 ತಿಂಗಳಲ್ಲಿ ಅದನ್ನು ಪೂರ್ಣಗೊಳಿಸಬೇಕು. 5 ಪೋರ್ಟಲ್ ಫ್ರೇಮ್ ಗಳ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಅಕ್ಟೋಬರ್ ಅಂತ್ಯದೊಳಗಾಗಿ ಪ್ರಮುಖ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ದೈವ ನೂರಾದರೂ ಭಕ್ತಿಯೊಂದೆ: ಡಿಕೆಶಿ
Next: ರೈಲ್ವೆ ಅಧಿಕಾರಿಗಳ ತರಾಟೆ ತೆಗೆದುಕೊಂಡ ಕೆ.ಜೆ.ಜಾರ್ಜ್

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.