ದಾವಣಗೆರೆ: ಇತ್ತೀಚಿನ ದಿನಗಳಲ್ಲಿ ಕಳ್ಳ ಸ್ವಾಮೀಜಿಗಳ ಕಳ್ಳಾಟವು ಹೆಚ್ಚಾಗಿ ಬಯಲಾಗುತ್ತಿದ್ದು, ಇದೀಗ ಈ ಸಾಲಿನಲ್ಲಿ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರ ಹೆಸರು ಕೂಡ ಕೇಳಿಬಂದಿದೆ.
16 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹರಿಹರ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಸ್ವಾಮೀಜಿ ವಿರುದ್ಧ ಹರಿಹರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಹೌದು, ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ವಿಚಾರವಾಗಿ ಕಳೆದ ವಾರವಷ್ಟೇ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಆದರೆ, ಕೇಸ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಪ್ರಕರಣದ ತನಿಖಾಧಿಕಾರಿ ಸುರೇಶ್ ಸಗರಿ ಅವರು ಶ್ರೀಗಳ ಜಾಮೀನನ್ನು ರದ್ದು ಮಾಡುವಂತೆ ಕೋರಿ ಕೋರ್ಟ್‌ಗೆ ಮಹತ್ವದ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರೇ ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ ಇದೆಯಾ ನಿಮಗೆ?: ಬಿವೈವಿ
ಹರಿಹರ ಪೊಲೀಸರು ಮಕ್ಕಳ ಮೇಲೆ ಸ್ವಾಮೀಜಿ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯ ಮತ್ತು ಹಲ್ಲೆ ಕುರಿತು ಸಂಪೂರ್ಣ ಮಾಹಿತಿಯನ್ನೊಳಗೊಂಡ ಪ್ರಮುಖ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಬಾಗಲಕೋಟೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಪೊಲೀಸರು ಸಲ್ಲಿಸಿರುವ ಈ ಜಾಮೀನು ರದ್ದತಿ ಅರ್ಜಿಯ ಪ್ರಮುಖ ವಿಚಾರಣೆಯನ್ನು ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯವು ಇದೇ ಮೇ 29 ರಂದು ಕೈಗೆತ್ತಿಕೊಳ್ಳಲಿದೆ. ಒಂದು ವೇಳೆ ನ್ಯಾಯಾಲಯವು ಪೊಲೀಸರ ವಾದವನ್ನು ಪುರಸ್ಕರಿಸಿ ಜಾಮೀನು ರದ್ದುಗೊಳಿಸಿದರೆ, ವಚನಾನಂದ ಸ್ವಾಮೀಜಿ ಅವರಿಗೆ ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ.
