ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ಜೈಲು ಸೇರವಾಸ ಅನುಭವಿಸುತ್ತಿರುವ ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇದೀಗ ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಇಂದು (ಶನಿವಾರ ಮೇ 23) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಜೈಲಿನಲ್ಲಿ ನಟ ದರ್ಶನ್ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ವದಂತಿಗಳು ಸುಳ್ಳು. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಸಿದ್ದಾರೆ. ಈ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ ಅಧಿಕಾರಿಗಳಿಂದ ಮೌಖಿಕವಾಗಿ ಮಾಹಿತಿ ಪಡೆದುಕೊಂಡಿದ್ದೇನೆ. ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಷಯ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಮೇ 4 ರಂದು ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕ್ರಮ; ಪೊಲೀಸರು ಹೇಳಿದ್ದೇನು?
ಜೈಲಿನಲ್ಲಿರುವ ನಟ ದರ್ಶನ್ ಅವರು ಆರೋಗ್ಯವಾಗಿದ್ದಾರೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
