ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸ್ಟಾರ್ ನಟಿಯರ ಫೋಟೋಗಳನ್ನು ಎಡಿಟ್ ಮಾಡಿ ಅಶ್ಲೀಲವಾಗಿ ತೋರಿಸುತ್ತಿರುವ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿದ್ದು, ಈಗಾಗಲೇ ಕನ್ನಡ ಚಿತ್ರರಂಗದ ಅದೆಷ್ಟೋ ನಟಿಯರು ನೋವನ್ನು ಅನುಭವಿಸಿದ್ದಾರೆ.
ಹೌದು, ಎಐ ಮೂಲಕ ಹೆಣ್ಣು ಮಕ್ಕಳ ಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುವ ಪ್ರಕಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಬೆನ್ನೆಲೆ ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟಿ ರುಕ್ಮಿಣಿ ಅವರನ್ನು ಬಿಕಿನಿ ಹಾಕಿಕೊಂಡಿರುವ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹಂಚಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿದ ನಟಿ ರುಕ್ಮಿಣಿ ವಸಂತ ಅವರು, ಅದು ನಾನಲ್ಲ ನನ್ನ ಮುಖವನ್ನು ಬಳಸಿ ನಕಲಿ ಫೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಈ ಭಾರೀ ಕಾನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಆರಾಧ್ಯ ಬಚ್ಚನ್ ಫುಲ್ ಮಿಂಚಿಂಗ್
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ, ಇದು ಎಐ ಬಳಸಿ ಮಾಡಿದ ನಕಲಿ ಫೋಟೋ ಎಂದು ಸ್ಪಷ್ಟನೆ ನೀಡಿದ್ದಾರೆ. ದಯವಿಟ್ಟು ಇಂತಹ ಸುಳ್ಳು ಊಹಾಪೋಹಾಗಳಿಗೆ ಕಿವಿಗೊಡಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಸೈಬರ್ ಠಾಣೆಗೂ ದೂರು ಕೊಡಲು ನಿರ್ಧಾರಿಸಿದ್ದಾರೆ.
