ಬೆಂಗಳೂರು: ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಅಂಗವಾಗಿ ನಡೆದ ಭಾಜಪ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭಾಗವಹಿಸಿದ್ದರು
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಿದ್ಧಾಂತ, ಸಂಘಟನೆ ಹಾಗೂ ರಾಷ್ಟ್ರಸೇವೆಯ ವಿಚಾರಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ಮಹತ್ವದ ಪಾತ್ರವಹಿಸುತ್ತವೆ ಎಂದರು. ಇದನ್ನೂ ಓದಿ: ಜೈಲಿನಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನ; ಗೃಹ ಸಚಿವರು ಹೇಳಿದ್ದೇನು?
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಚೆಲುವಾದಿ ನಾರಾಯಣಸ್ವಾಮಿ , ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ , ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎಸ್. ಹರೀಶ್ ರಾಜ್ಯ ಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ, ಶಾಸಕರಾದ ಎಸ್. ವಿಶ್ವನಾಥ್, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಮುನಿರಾಜು ವಿಧಾನ ಪರಿಷತ್ ಸದಸ್ಯರಾದ ಕೇಶವ್ ಪ್ರಸಾದ್ ಹಾಗೂ ಇತರ ಪ್ರಮುಖ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
