ಮೈಸೂರು: ರಾಜ್ಯದಲ್ಲಿ ಇನ್ಮುಂದೆ ಶಾಲಾ-ಕಾಲೇಜುಗಳಲ್ಲಿ ಜನಿವಾ,ರ ಹಿಜಾಬ್ ಮತ್ತು ಇನ್ನಿತರ ಧಾರ್ಮಿಕ ಸಂಕೇತಗಳನ್ನು ಧರಿಸಿಕೊಂಡು ಶಾಲಾ-ಕಾಲೇಜುಗಳಿಗೆ ಬರಬಹುದು ಎಂದು ಈಗಾಗಲೇ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಇನ್ನು ರಾಜ್ಯ ಸರ್ಕಾರದ ಆದೇಶವನ್ನು ಬಿಜೆಪಿಯು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರವು ಇಷ್ಟೊಂದು ನಾಟಕವಾಡುತ್ತಿದೆ ಎಂದು ಕಿಡಿ ಕಾರುತ್ತಿದ್ದಾರೆ
ಇನ್ನು ಹಿಜಾಬ್ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಕ್ರಿಯಿಸಿದ್ದು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಸೂರ್ಯನಗರದಲ್ಲಿ ಪ್ರಗತಿಯ ಹೊಸ ಮೈಲಿಗಲ್ಲು: ಡಿಕೆಶಿ
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಎಂದಿದ್ದಾರೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.
ಇನ್ನು ಯಾವುದೇ ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲುಗಳನ್ನು ಧರಿಸಿ ಬಂದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.
