ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12ರ ಕಂಟೆಸ್ಟೆಂಟ್ ಹಾಗೂ ನಿರೂಪಕಿ ಜಾನ್ವಿಯವರು ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿದ್ದಾರೆ.
ತಮ್ಮ ಸ್ಟೈಲ್ ಮೂಲಕವೇ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಬಿಗ್ ಬಾಸ್ ಖ್ಯಾತಿಯ ಜಾನ್ವಿ ಅವರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದು ಮುಂದಿನ ಚುನಾವಣೆಯಲ್ಲಿ ಜಾನ್ವಿಯವರು ಚುನಾವಣೆಗೆ ಸ್ಪರ್ಧಿಸುತ್ತಾರ ಎಂದು ಎಲ್ಲರಲ್ಲಿ ಕುತೂಹಲ ಮೂಡಿದೆ.
ಹೌದು, ನಿರೂಪಕಿ ಜಾನ್ವಿ ಅವರು ಅಧಿಕೃತವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷ ಸೇರ್ಕೊಂಡರು. ಇದನ್ನೂ ಓದಿ: ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ: ಡಿಕೆಶಿ
ಈ ಸಂದರ್ಭದಲ್ಲಿ ಪ್ರಾಧಿಕಾರದ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು ಹಿರಿಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
