Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ
  • Cinema
  • National

ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ

Praja Vahini May 25, 2026 1 minute read
WhatsApp Image 2026-05-25 at 12.02.41
Spread the love

ಇತ್ತೀಚಿಗಷ್ಟೇ ಬಿಡುಗಡೆಯಾದ ‘ದೃಶ್ಯಂ 3’ ಸಿನಿಮಾ ಕೇವಲ ಮಲಯಾಳಂ ಭಾಷೆಯಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಾದ್ಯಂತ ಭರ್ಜರಿ ಧೂಳೆಬ್ಬಿಸುತ್ತಿದೆ.

ಹೌದು, ವಿದೇಶಿ ಮಾರುಕಟ್ಟೆಯಲ್ಲೂ ಸುನಾಮಿ ಎಬ್ಬಿಸುತ್ತಿರುವ ‘ದೃಶ್ಯಂ 3’ ಸಿನಿಮಾ ದಾಪುಗಾಲು ಇಡುತ್ತಿದೆ.  ಕೇವಲ ಬಿಡುಗಡೆಯಾದ ನಾಲ್ಕೇ ನಾಲ್ಕು ದಿನಗಳಲ್ಲಿ 141.34 ಕೋಟಿ ರೂಪಾಯಿ ಗಳಿಸುವ ಮೂಲಕ ‘ದೃಶ್ಯಂ 3’ ಹೊಸ ಇತಿಹಾಸ ಸೃಷ್ಟಿಸಿದೆ.

ನಿರ್ದೇಶಕ ಜೀತು ಜೋಸೆಫ್ ಮತ್ತು ಮೋಹನ್‌ಲಾಲ್ ಕಾಂಬಿನೇಷನ್‌ನ ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಕೇವಲ ಕಂಟೆಂಟ್ ಬಲದಿಂದಲೇ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಬರೆಯುತ್ತಿದೆ.

ಮಲಯಾಳಂ ಚಿತ್ರರಂಗದಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಹೊಸ ಸೇರ್ಪಡೆ.

ಬಿಡುಗಡೆಯಾದ ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ವಿಶ್ವದಾದ್ಯಂತ ದಾಖಲೆಯ ಗಳಿಕೆ ಮಾಡಿದೆ. 4ನೇ ದಿನವಾದ ಭಾನುವಾರ ಒಂದೇ ದಿನ ಭಾರತದಲ್ಲಿ 5,270 ಶೋಗಳಿಂದ ಬರೋಬ್ಬರಿ 13.95 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 63.34 ಕೋಟಿ ರೂಪಾಯಿ ದಾಟಿದ್ದು, ನೆಟ್ ಕಲೆಕ್ಷನ್ 54.55 ಕೋಟಿ ರೂಪಾಯಿಗೆ ಬಂದು ತಲುಪಿದೆ. ಇದನ್ನೂ ಓದಿ: ಈ ಭಾರೀ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಆರಾಧ್ಯ ಬಚ್ಚನ್ ಫುಲ್ ಮಿಂಚಿಂಗ್

ಕೇರಳ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಯಲ್ಲೂ ‘ದೃಶ್ಯಂ 3’ ಸುನಾಮಿ ಎಬ್ಬಿಸಿದೆ. 4ನೇ ದಿನ ವಿದೇಶದಲ್ಲಿ13.00 ಕೋಟಿ ರೂಪಾಯಿ ಬಾಚಿಕೊಂಡಿರುವ ಈ ಚಿತ್ರ, ಒಟ್ಟು ಓವರ್‌ಸೀಸ್ ಗ್ರಾಸ್ ಕಲೆಕ್ಷನ್ ಅನ್ನು 78.00 ಕೋಟಿ ರೂಪಾಯಿಗೆ ತಲುಪಿದೆ. ಭಾರತ ಮತ್ತು ವಿದೇಶದ ಗಳಿಕೆಯನ್ನು ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಕೇವಲ 4 ದಿನಗಳಲ್ಲಿ ವಿಶ್ವದಾದ್ಯಂತ 141.34 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.

 

About the Author

Praja Vahini

Editor

View All Posts

Spread the love

Post navigation

Previous: ಭಟ್ಕಳ ನದಿ ದುರಂತ; ಮತ್ತೊಂದು ಮೃತದೇಹ ಪತ್ತೆ
Next: ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ!

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.