ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಸಿಎಂ ಕರ್ಚಿ ಕದನಕೆ ಇಂದು ಅಂತಿಮ ಗಟ್ಟ ತಲುಪಿದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಗುರುವಾರ ಮೇ 28) ಅಧಿಕೃತವಾಗಿ ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯದ ಜನರು ನನಗೆ ಅವಕಾಶ ಕೊಟ್ಟಿದ್ದಾರೆ ಹಾಗಾಗಿ ನಾನು ಇನ್ನೂ ಎರಡು ವರ್ಷಗಳ ಕಾಲ ಶಾಸಕನಾಗಿ ನನ್ನ ರಾಜ್ಯದ ಜನತೆಯ ಸೇವೆ ಮತ್ತು ನನ್ನ ಕ್ಷೇತ್ರದ ಜನತೆ ಸೇವೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದರು. ನಾನು ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿಗೆ ಅಪ್ಪುಗೆ ವಿದಾಯ ಹೇಳಿದ ಸಿಎಂ ಸಿದ್ದು
ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ಎರಡು ವರ್ಷ ಇದೆ. ಅಲ್ಲಿವರೆಗೆ ಕರ್ನಾಟಕ ಹಾಗೂ ನನ್ನ ಕ್ಷೇತ್ರದ ಜನತೆ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
