ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಜಮೀರ್ ಅಹ್ಮದ್ ಆಡಿಯೋ ಹೊಸ ಸಂಚಲನ ಸೃಷ್ಟಿಸಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಅಲ್ಲದೆ ಕುಕ್ಕರ್ ಗುರುತಿನ ಅಭ್ಯರ್ಥಿಗೆ ಮತ ನೀಡುವಂತೆ ಜಮೀರ್ ಅಹ್ಮದ್ ಮತ್ತು ಕೆಎಂ ಡಿ ಸಿ ಡೈರೆಕ್ಟರ್ ಆಗಿರುವ ಮೊಹಮ್ಮದ್ ಸಿರಾಜ್ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಎಲ್ಲೆಡೆ ವೈರಲ್ ಆಗುತ್ತಿರುವ ಬೆನ್ನಲ್ಲೇ ಇದೀಗ ಬಮುಲ್ ಅಧ್ಯಕ್ಷ ಡಿ ಕೆ ಸುರೇಶ್ ಅವರು ಇಂದು (ಮಂಗಳವಾರ ಜೂ 02) ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ.
ಇನ್ನು ಆಡಿಯೋ ವೈರಲ್ ಆಗಿರುವ ಬೆನ್ನೆಲಿಯೇ ಡಿಕೆ ಸುರೇಶ ಅವರು ಸಚಿವ ಜಮೀರ್ ಅಹ್ಮದ್ ಅವರನ್ನ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.
ಹೌದು ಡಿ.ಕೆ. ಸುರೇಶ್ ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಶಾಸಕ ಎಂ ಕೃಷ್ಣಪ್ಪ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಶಾಂತಬಾಬು
ಜಮೀರ್ ಅಹ್ಮದ್ ಉಪಮುಖ್ಯಮಂತ್ರಿ ಮತ್ತು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ನಡುವೆ ಇತ್ತೀಚೆಗೆ ದಾವಣಗೆರೆ ದಕ್ಷಿಣ ಉಪಚುನಾವಣೆ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರ ಭೇಟಿ ಹೆಚ್ಚಿನ ಮಹತ್ವ ಪಡೆದಿದೆ.
ಹಾಗಾದ್ರೆ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಗೆ ಯಾವ ಮಂತ್ರಿ ಸ್ಥಾನ ಒಲಿದು ಬರಲಿದೆ ಅನ್ನೋದು ಕಾದು ನೋಡಬೇಕಿದೆ.
