ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಡಿಕೆ ಶಿವಕುಮಾರ್ ಅವರು ಇಂದು ಹಲವು ಹಿರಿಯ ರಾಜಕಾರಣಿಗಳ ಆಶೀರ್ವಾದ ಪಡೆದಿದ್ದಾರೆ.
ಹೌದು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಕಾಲಿಗೆ ನಮಸ್ಕರಿಸುವ ಮೂಲಕ ಡಿಕೆ ಶಿವಕುಮಾರ್ ಅವರು ಆಶೀರ್ವಾದ ಪಡೆದಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ. ಶಿವಕುಮಾರ್, ಹಿರಿಯ ಮುತ್ಸದ್ದಿ ನಾಯಕನಿಗೆ ಗೌರವ ಸಲ್ಲಿಸಿದರು. ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು.
ಅಲ್ಲದೆ ಇಂದು (ಬುಧವಾರ ಜೂನ್ 3) ಸಂಜೆ 4.5ಕ್ಕೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು.
