ಬೆಂಗಳೂರು: ರಾಜಕಾರಣ ಅಂದ್ರೇನೆ ಇಷ್ಟೇ ಅಲ್ವಾ ಯಾವುದೇ ಮನಸ್ತಾಪ, ಯಾವುದೇ ದ್ವೇಷ ಇದ್ದರು ಕೂಡ ಸಮಯ ಸಂದರ್ಭ ಬಂದಾಗ ಎಲ್ಲರನ್ನು ಗೌರವಿಸುವುದು ಎಲ್ಲರನ್ನೂ ಆಹ್ವಾನಿಸುವುದು ಸರ್ವೇಸಾಮಾನ್ಯ.
ಅದರಂತೆ ಡಿಕೆ ಶಿವಕುಮಾರ್ ಅವರು ಇಂದು ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿಗಳಿಗೆ ಇಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಅಧಿಕೃತ ನಿವಾಸ ‘ಧವಳಗಿರಿ’ಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಪ್ರೀತಿಯಿಂದ ಪ್ರಮಾಣವಚನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು. ಇದನ್ನೂ ಓದಿ: ಗೌಡ್ರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ
ಇದೇ ವೇಳೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ಯಶಸ್ವಿಯಾಗಿ ನಡೆಸಲು ಮತ್ತು ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಕಡೆಯಿಂದ ಅಗತ್ಯ ಸಹಕಾರ ನೀಡಬೇಕೆಂದು ಹಿರಿಯ ನಾಯಕನಲ್ಲಿ ಕೋರಿಕೊಂಡರು.
