ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಪಡೆದುಕೊಂಡಿರುವ ಸಚಿವ ಯುಟಿ ಖಾದರ್ ಅವರು ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ಮಹತ್ವದ ಕಾರ್ಯಗಳನ್ನು ಕೈಗೊಂಡಿದ್ದು, ಇದೀಗ ವೈದ್ಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಚಿವರಾದ ದಿನೇಶ್ ಕೊಂಡುರಾ ಅವರು ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಅವರ ಕಾರ್ಯಗಳನ್ನು ನಾನು ಮುಂದಿವರಿಸಿಕೊಂಡು ಹೋಗುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗಬಾರದು: ಬಲ್ಕಿಸ್ ಬಾನು
ಎಂಬಿಬಿಎಸ್ ಪದವಿ ಮುಗಿಸಿದ ವೈದ್ಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಲಭಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಎಂಬಿಬಿಎಸ್ ಪದವೀಧರರು ನೇರವಾಗಿ ವಾಕ್-ಇನ್ ಸಂದರ್ಶನದ ಮೂಲಕ ಜಿಲ್ಲಾ ಆರೋಗ್ಯ ಅಧಿಕಾರಿಗೆ ಪತ್ರ ನೀಡಬಹುದು. ಪತ್ರ ನೀಡಿದ ಒಂದು ವಾರದೊಳಗೆ ಅವರನ್ನು ನೇಮಕಾತಿ ಮಾಡಿಕೊಂಡು ಕೆಲಸ ನೀಡಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಈ ವೈದ್ಯರಿಗೆ 60,000 ರೂ. ವೇತನವನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಪರಿಣಾಮಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಜನರಿಂದ ಮತ್ತು ವೈದ್ಯರಿಂದ ಸಲಹೆಗಳನ್ನು ಆಹ್ವಾನಿಸುವುದಾಗಿ ಯು.ಟಿ. ಖಾದರ್ ತಿಳಿಸಿದ್ದಾರೆ.
