Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಟ್ ಕಾಯಿನ್ ಕೇಸ್; ನಲಪಾಡ್‌ಗೆ ಶುರುವಾಯ್ತು ಕಾನೂನು ಭೀತಿ
  • Bangalore
  • Crime
  • Politics
  • State

ಬಿಟ್ ಕಾಯಿನ್ ಕೇಸ್; ನಲಪಾಡ್‌ಗೆ ಶುರುವಾಯ್ತು ಕಾನೂನು ಭೀತಿ

Praja Vahini June 9, 2026
WhatsApp Image 2026-06-09 at 13.05.24
Spread the love

ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳ ಹಿಂದೆ ಬಿಟ್ ಕಾಯಿನ್ ಪ್ರಕಣವು ಬಾರಿ ಸದ್ದು ಮಾಡಿತ್ತು.

ಹೌದು, ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಹಗರಣವು ಬಾರಿಸದ್ದು ಮಾಡುತ್ತಿರುವ ಬೆನ್ನೆಲೆ ಎಸ್ಐಟಿ ಅಧಿಕಾರಿಗಳು ಜೇಡರ ಬಲೆ ಹೆಣದಂತೆ ಆರೋಪಿಗಳ ವಿರುದ್ಧ ಈಗಾಗಲೇ ಕೂಲಂಕುಶವಾಗಿ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇನ್ನು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹ್ಯಾಕರ್ ಶ್ರೀಕಿ ಸೇರಿದಂತೆ ಕಾಂಗ್ರೆಸ್‌ನ ಯುವ ಮುಖಂಡ ಮೊಹಮ್ಮದ್ ನಲಪಾಡ್ ಅವರ ವಿರುದ್ಧವೂ ಕೂಡ ಇದೀಗ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂಬ ವರದಿ ಹೊರ ಬಿದ್ದಿದೆ. ಈ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಸದ್ಯ ನ್ಯಾಯಾಲಯಕ್ಕೆ ಅಧಿಕೃತವಾಗಿ ಆರೋಪಪಟ್ಟಿ ಸಲ್ಲಿಕೆ ಮಾಡಿದೆ.

ಇತ್ತೀಚೆಗಷ್ಟೇ ಇಡಿ ಅಧಿಕಾರಿಗಳು ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದರು, ಇದರ ಬೆನ್ನಲ್ಲೇ ಈಗ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಪ್ರಮುಖ ಆರೋಪಿಗಳಾದ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಮೊಹಮ್ಮದ್ ನಲಪಾಡ್ ಸೇರಿದಂತೆ ಇತರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಬಿಟ್‌ಕಾಯಿನ್ ಹಗರಣದ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮೊಹಮ್ಮದ್ ನಲಪಾಡ್ ವಿರುದ್ಧ ಗಂಭೀರ ಅಂಶಗಳನ್ನು ಉಲ್ಲೇಖಿಸಿದ್ದಾರೆ. ತುಮಕೂರಿನ ಖಾಸಗಿ ಕಂಪನಿಯೊಂದರ ಬಿಟ್‌ಕಾಯಿನ್ ಕಳವು ಕೃತ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯಿಂದ ನಲಪಾಡ್‌ಗೆ ದೊಡ್ಡ ಮೊತ್ತದ ಪಾಲು ಸಿಕ್ಕಿದೆ.

ಹ್ಯಾಕರ್ ಶ್ರೀಕಿ ಕಳುವು ಮಾಡಿದ್ದ ಬಿಟ್‌ಕಾಯಿನ್‌ಗಳನ್ನು ನಗದೀಕರಣ ಮಾಡಿಕೊಳ್ಳಲು ಮೊಹಮ್ಮದ್ ನಲಪಾಡ್‌ನನ್ನು ಸಂಪರ್ಕ ಮಾಡಿದ್ದ. ನಲಪಾಡ್ ತನ್ನ ಸ್ನೇಹಿತರ ಮುಖಾಂತರ ಈ ಬಿಟ್‌ಕಾಯಿನ್‌ಗಳನ್ನು ನಗದೀಕರಣ ಮಾಡಿಕೊಟ್ಟಿದ್ದ ಎನ್ನುವ ವಿಚಾರವನ್ನು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ ಗೃಹಲಕ್ಷ್ಮಿ ಹಣ ಪಡೆಯಲು ಹೊಸ ರೂಲ್ಸ್ ಜಾರಿ!

ಇದರಿಂದ ಕಾಂಗ್ರೆಸ್ ನ ಯುವ ಮುಖಂಡ ಮೊಹಮ್ಮದ್ ನಲಪಾಡಿಗೆ ಇದೀಗ ಎಲ್ಲಿದೆ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಮೊಹಮ್ಮದ್ ನಲಪಾಡ್ ಅವರಿಗೆ ಎಸ್ ಐ ಟಿ ಅಧಿಕಾರಿಗಳು ಯಾವ ರೀತಿ ತನಿಖೆ ನಡೆಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

About the Author

Praja Vahini

Editor

View All Posts

Spread the love

Post navigation

Previous: ಇನ್ಮುಂದೆ ಗೃಹಲಕ್ಷ್ಮಿ ಹಣ ಪಡೆಯಲು ಹೊಸ ರೂಲ್ಸ್ ಜಾರಿ!
Next: ನಿಮ್ಮಪ್ಪನಿಂದ RSS ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ?: ಗೃಹ ಸಚಿವರ ವಿರುದ್ಧ ಸಿಟಿ ರವಿ ವಾಗ್ದಾಳಿ

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.