ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಂದೆ ವಿದ್ಯಾರ್ಥಿಗಳಿಗೆ ಸಿಹಿಸಿದ್ದು ನೀಡಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಈಗಾಗಲೇ ಘೋಷಿಸಿದ್ದಾರೆ.
ಹೌದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನದಂದು ರಾಜ್ಯದಲ್ಲಿರುವ ವಿದ್ಯಾರ್ಥಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಘೋಷಿಸಿರುವ ಬೆನ್ನೆಲೆ ಇದೀಗ ವಿದ್ಯಾರ್ಥಿಗಳಿಗೆ ಮೆಟ್ರೋದಲ್ಲೂ ಕೂಡ ರಿಯಾಯಿತಿ ನೀಡಿದರೆ ವಿದ್ಯಾರ್ಥಿಗಳ ದಿನನಿತ್ಯದ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಈ ಕುರಿತು ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ವಿದ್ಯಾರ್ಥಿಗಳ ಪ್ರಕಾರ, ಮೆಟ್ರೋ ಪ್ರಯಾಣಕ್ಕೆ ರಿಯಾಯಿತಿ ನೀಡಿದರೆ ಹೆಚ್ಚಿನವರು ಸಾರ್ವಜನಿಕ ಸಾರಿಗೆಯನ್ನು ಬಳಸುವಂತಾಗುತ್ತದೆ. ಇದರಿಂದ ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗುವ ಜೊತೆಗೆ ವಾಯುಮಾಲಿನ್ಯ ನಿಯಂತ್ರಣಕ್ಕೂ ಸಹಾಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸರ್ಕಾರವು ಸುರಕ್ಷಿತ, ಪರಿಣಾಮಕಾರಿ ಭವಿಷ್ಯಕ್ಕೆ ತಯಾರು: ಪ್ರಿಯಾಂಕ ಖರ್ಗೆ
ಹಾಗಾದ್ರೆ ವಿದ್ಯಾರ್ಥಿಗಳ ಮನವಿ ಮೇರೆಗೆ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಒದಗಿಸಿಕೊಡುತ್ತದ ಸರ್ಕಾರ ಎಂಬುದು ಕಾದು ನೋಡಬೇಕಿದೆ.
