Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕರು: ಬೊಮ್ಮಾಯಿ
  • Politics
  • State
  • ಗದಗ

ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕರು: ಬೊಮ್ಮಾಯಿ

Praja Vahini June 10, 2026 1 minute read
WhatsApp Image 2026-06-10 at 12.58.13
Spread the love

ಗದಗ: ಭಾರತದ ಇತಿಹಾಸದಲ್ಲಿ ಇದೀಗ ನರೇಂದ್ರ ಮೋದಿಯವರು ಐತಿಹಾಸಿಕ ಇತಿಹಾಸ ಬರೆದಿದ್ದು, ಬಿಜೆಪಿಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಮೋದಿ ಅವರ ಅಭಿಮಾನಿಗಳು ಇಡೀ ದೇಶದಾದ್ಯಂತ ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.

ಜಾಗತಿಕ ಬಿಕ್ಕಟ್ಟಿನಿಂದ ಭಾರತಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನಡೆಸುವಂತ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ ಇದೆ. ಅದನ್ನು ಕಳೆದ ಮೂರ್ನಾಲ್ಕು ತಿಂಗಳಲ್ಲಿ ತೋರಿಸಿದ್ದಾರೆ. 2047 ರಲ್ಲಿ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಆಗಲು ನರೇಂದ್ರ ಮೋದಿಯವರ ಅವಶ್ಯಕತೆ ಬಹಳ ಇದೆ. ಅವರಿಗೆ ಜನ ಸೇವೆ ಮಾಡುವ ಶಕ್ತಿ, ಆರೋಗ್ಯ ಆಯಸ್ಸು ಕೊಡಲಿ, ದೇಶದ ಸೇವೆಯನ್ನು ಇನ್ನಷ್ಟು ದಿನ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಇಂದು (ಬುಧವಾರ ಜೂ. 10) ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಏರ್ಪಡಿಸಿದ್ದ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ನಮ್ಮ ನೆಚ್ಚಿನ ಪ್ರಧಾನಮಂತ್ರಿ ದೇಶ ಕಂಡ ಅಪ್ರತಿಮ ನಾಯಕರು. ಸುದೀರ್ಘವಾದ ರಾಜಕೀಯ ಜೀವನದಲ್ಲಿ ಭಾರತದ ಪ್ರಧಾನಮಂತ್ರಿ ಯಾಗಿ 12 ವರ್ಷ ಪೂರೈಸಿದ್ದಾರೆ. ಅಷ್ಟೇ ಅಲ್ಲ ಅತಿ ಹೆಚ್ಚು ಅವಧಿಗೆ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ ಎನ್ನುವ ದಾಖಲೆ ಮಾಡಿದ್ದಾರೆ. ಇದನ್ನೂ ಓದಿ: ನೂತನ ಕೆಪಿಸಿಸಿ ಅಧ್ಯಕ್ಷರನ್ನ ಅಭಿನಂದಿಸಿದ ಬಿ ನಾಗೇಂದ್ರ

ಇವತ್ತಿನ ಆಧುನಿಕ ಕಾಲದಲ್ಲಿ ಇಷ್ಟೊಂದು ಜನಜಾಗೃತಿಯಾಗಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಿಂದ ಹಿಡಿದು ಮಾಧ್ಯಮಗಳು ಎಲ್ಲವರೀತಿಯ ಸುದ್ದಿಗಳನ್ನು ಕೊಡುವಲ್ಲಿ ಮುಂದಿರುವ ಈ ಸಂದರ್ಭದಲ್ಲಿ ಜನಪ್ರೀಯತೆ ಉಳಿಸಿಕೊಳ್ಳಲು ಜನರ ಪರ ರಾಜಕಾರಣ ಮಾಡಿ ಜನರ ಹಿತಕ್ಕಾಗಿ ದಿನಕ್ಕೆ 18 ತಾಸು ಕೆಲಸ ಮಾಡಿದ್ದಾರೆ. ನಿಂರತರ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ಮಾಡಿರುವ ಹಲವಾರು ಯೋಜನೆಗಳು ಭಾರತವನ್ನು ವಿಶ್ವದಲ್ಲಿಯೇ ಮೂರನೇ ಆರ್ಥಿಕ ಶಕ್ತಿಯಾಗಿ ತೆಗೆದುಕೊಂಡು ಹೋಗಿದೆ.

ಭಾರತದ ಅಭಿವೃದ್ಧಿಯಲ್ಲಿ ಅತ್ಯಂತ ಕೆಳ ವರ್ಗದವರೂ ಕೂಡ ಅದರ ಲಾಭ ಮುಟುವಂತೆ ಮಾಡಿದ್ದಾರೆ. ಅದಕ್ಕಾಗಿಯೇ ಪ್ರಥಮವಾಗಿ 25 ಕೋಟಿ ಜನರು ಬಡತನದಿಂದ ಮೇಲೆತ್ತುವ ಕಾರ್ಯವಾಗಿದೆ. ಬಡವರಿಗೆ ಮನೆಗಳನ್ನು ನೀಡುವ ಮುಖಾಂತರ ಆರೋಗ್ಯ ವಿಮೆ, ಶಿಕ್ಷಣ, ಉದ್ಯೋಗ ಕೊಡುವ ಮುಖಾಂತರ ಅವರು ಮೂರು ಕೆಲಸಗಳನ್ನು ಬಹಳ ಸ್ಪಷ್ಟವಾಗಿ ಮಾಡಿದ್ದಾರೆ. ಜನಸಾಮಾನ್ಯರು, ಬಡವರು, ದೀನದಲಿತರಿಗೆ, ಹೆಣ್ಣು ಮಕ್ಕಳಿಗೆ ಮತ್ತು ಯುವಕರಿಗೆ, ಶಿಕ್ಷಣ, ಉದ್ಯೋಗ, ಸಬಲೀಕರಣ ಮೂರನ್ನು ಕೊಟ್ಟಿರುವ ಧೀಮಂತ ನಾಯಕ ನರೇಂದ್ರ ಮೋದಿ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ನೂತನ ಕೆಪಿಸಿಸಿ ಅಧ್ಯಕ್ಷರನ್ನ ಅಭಿನಂದಿಸಿದ ಬಿ ನಾಗೇಂದ್ರ
Next: ಈಜಿಪುರ ಫ್ಲೈ ಓವರ್ ಕಾಮಗಾರಿ ಆಯುಕ್ತರಿಂದ ಪರಿಶೀಲನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.