Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈಜಿಪುರ ಫ್ಲೈ ಓವರ್ ಕಾಮಗಾರಿ ಆಯುಕ್ತರಿಂದ ಪರಿಶೀಲನೆ
  • Bangalore
  • State

ಈಜಿಪುರ ಫ್ಲೈ ಓವರ್ ಕಾಮಗಾರಿ ಆಯುಕ್ತರಿಂದ ಪರಿಶೀಲನೆ

Praja Vahini June 10, 2026 1 minute read
WhatsApp Image 2026-06-10 at 13.07.13
Spread the love

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೇಂದ್ರೀಯ ಸದನ ಹಾಗೂ ಸೆಂಟ್ ಜಾನ್ಸ್ ಹಾಸ್ಟೆಲ್ ಬಳಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯಿಂದಾಗಿ ಸಾರ್ವಜನಿಕ ಸಂಚಾರಕ್ಕೆ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಬೆಂಗಳೂರು ದಕ್ಷಿಣ ಪಾಲಿಕೆ ಆಯುಕ್ತರಾದ ಕೆ. ಎನ್. ರಮೇಶ್ ರವರು ಇಂದು (ಬುಧವಾರ ಜೂ. 10) ಸ್ಥಳ ಪರಿಶೀಲನೆ ನಡೆಸಿ ಪ್ರಗತಿ ವೀಕ್ಷಿಸಿದರು.

ಸರ್ವಿಸ್ ರಸ್ತೆ ಅಭಿವೃದ್ಧಿಗೆ ಸ್ಥಳ ಪರಿಶೀಲನೆ

ಫ್ಲೈ ಓವರ್ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯವಾಗಿ ಸರ್ವಿಸ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಮಡಿವಾಳ ಮುಖ್ಯರಸ್ತೆ ಹಾಗೂ ಈಜಿಪುರ-ಮಡಿವಾಳ ರಸ್ತೆ ಮಾರ್ಗವನ್ನು  ಆಯುಕ್ತರು ಪರಿಶೀಲಿಸಿದರು. ವಾಹನ ದಟ್ಟಣೆ ನಿಯಂತ್ರಿಸಲು ಸರ್ವಿಸ್ ರಸ್ತೆಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂ ಸ್ವಾಧೀನಕ್ಕಾಗಿ ಮನವಿ ಪತ್ರ ನೀಡಲು ಆಯುಕ್ತರ ಸೂಚನೆ

ಕೇಂದ್ರೀಯ ಸದನ ಜಂಕ್ಷನ್ ಬಳಿ ಸರ್ವಿಸ್ ರಸ್ತೆ ವಿಸ್ತರಣೆಗಾಗಿ ಸೆಂಟ್ ಜಾನ್ಸ್ ಸಂಸ್ಥೆಯ ಸುಮಾರು 590 ಚದರ ಮೀಟರ್  ಜಾಗದ ಅಗತ್ಯವಿದ್ದು, ಸದರಿ ಜಾಗವನ್ನು ರಸ್ತೆ ಕಾಮಗಾರಿಗೆ ಬಿಟ್ಟುಕೊಡುವ ಸಂಬಂಧ ಹಾಗೂ ಸೇಂಟ್ ಜಾನ್ ಸಿಗ್ನಲ್ ಬಳಿ ಪ್ಲೈ ಓವರ್ ನ ಒಂದು ಪಿಲ್ಲರ್ ಗೆ ಹಾಗೂ ಸರ್ಜಾಪುರ ಕಡೆಯಿಂದ ಬರುವ ವಾಹನಗಳಿಗೆ ನಿರ್ಮಿಸಬೇಕಿರುವ ಹೆಚ್ಚುವರಿ ಅಪ್ ಫ್ರೇಮ್ ಗೆ ಅವಶ್ಯವಿರುವ ಭೂಮಿಯನ್ನು ನೀಡುವಂತೆ ಕೋರಿ ಸೇಂಟ್ ಜಾನ್ ಆಸ್ಪತ್ರೆಗೆ ಮನವಿ ಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕರು: ಬೊಮ್ಮಾಯಿ

ಸುಗಮ ಸಂಚಾರಕ್ಕೆ ಕ್ರಿಯಾ ಯೋಜನೆ ರೂಪಿಸಿ

ಫ್ಲೈ ಓವರ್ ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ರಸ್ತೆಗಳನ್ನು ಸಿದ್ಧಪಡಿಸಿಕೊಳ್ಳಲು ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಪೂರಕವಾದ ಕ್ರಿಯಾ ಯೋಜನೆಯನ್ನು ಆದಷ್ಟು ಬೇಗ ರೂಪಿಸಿ, ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸ್ಥಳದಲ್ಲಿದ್ದ ಅಭಿಯಂತರರಿಗೆ ಸೂಚನೆ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕರು: ಬೊಮ್ಮಾಯಿ
Next: ಅವಿರೋಧವಾಗಿ ರಾಜ್ಯಸಭಾ ಸದಸ್ಯರಾಗಿ ಮನ್ಸೂರ್ ಆಲಿಖಾನ್ ಆಯ್ಕೆ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.