Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವರು
  • Bangalore
  • Politics
  • State

ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವರು

Praja Vahini June 11, 2026 1 minute read
WhatsApp Image 2026-06-11 at 16.17.25
Spread the love

ಬೆಂಗಳೂರು: ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲೂ ‘ವಿಶೇಷ ರೌಡಿ ನಿಗ್ರಹ ಪಡೆ’ಯನ್ನು ರಚಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳು ರೌಡಿಗಳ ಹುಟ್ಟುಹಬ್ಬದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಊಟಕ್ಕೆ ಹೋಗುವುದು ಅಥವಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಗೃಹ ಸಚಿವ ಪ್ರಿಯಾಂಕ ಖರ್ಗೆ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳು ರೌಡಿಶೀಟರ್ ಅಥವಾ ಜೈಲಿನಲ್ಲಿರುವ ಕೈದಿಗಳ ಜೊತೆ ಇಂತಹ ಲೋಪಗಳು ಕಂಡುಬಂದಲ್ಲಿ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮಹಿಳಾ ಸುರಕ್ಷತೆಯನ್ನು ಸುಧಾರಿಸುವ ಕ್ರಮಗಳು ಹಾಗೂ ಮಾದಕ ವಸ್ತುಗಳ ವಿರುದ್ಧ ಶೂನ್ಯ-ಸಹಿಷ್ಣುತೆ ನೀತಿಯೊಂದಿಗೆ ಡ್ರಗ್-ಮುಕ್ತ ಬೆಂಗಳೂರು ನಿರ್ಮಾಣ, ಮಾನವ ಕಳ್ಳಸಾಗಣೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ತಡೆಗಟ್ಟುವ ಬಗ್ಗೆ ಚರ್ಚಿಸಿದರು.

ಬೆಂಗಳೂರು ನಗರದ ಪ್ರಮುಖ ಸಮಸ್ಯೆಯಾದ ಟ್ರಾಫಿಕ್ ದಟ್ಟಣೆಯನ್ನು ಕೇವಲ ಮೂಲಸೌಕರ್ಯ ಬದಲಾವಣೆಯಿಂದಲ್ಲದೆ, ವ್ಯವಸ್ಥಿತ ಲೋಪದೋಷಗಳನ್ನು ಸರಿಪಡಿಸುವ ಮೂಲಕ ನಿರ್ವಹಿಸಲು ನಿರ್ಧರಿಸಲಾಗಿದೆ ಇದಕ್ಕಾಗಿ ಬಿಎಂಟಿಸಿ, ಬಿಎಂಆರ್‌ಸಿಎಲ್ ಮತ್ತು ಖಾಸಗಿ ಸಹಭಾಗಿತ್ವದೊಂದಿಗೆ ‘ಬೆಂಗಳೂರು ಅರ್ಬನ್ ಮೊಬಿಲಿಟಿ ಮಿಷನ್’ ತಂಡವನ್ನು ರಚಿಸಲಾಗುವುದು. ಇದರ ಸಂಪೂರ್ಣ ನೀಲಿ ನಕ್ಷೆಯನ್ನು ಮುಂದಿನ 2-3 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದರು.

ಬೆಂಗಳೂರು ಜಾಗತಿಕ ಮಟ್ಟದಲ್ಲಿ 4ನೇ ಅತಿ ದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿರುವುದರಿಂದ ಇಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳನ್ನು ಮಟ್ಟಹಾಕಲು ಗೃಹ ಇಲಾಖೆ, ಐಟಿ-ಬಿಟಿ ಮತ್ತು ಇ-ಆಡಳಿತ ಇಲಾಖೆಗಳನ್ನು ಒಗ್ಗೂಡಿಸಿ ಸಮಗ್ರ ನೀತಿಯನ್ನು ತರಲಾಗುವುದು. ಮುಂದಿನ ವಾರ ಖಾಸಗಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ಸಭೆ ನಡೆಸಿ, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ‘ಸೇಫ್ಟಿ ಗಾರ್ಡ್ ರೈಲ್ಸ್’ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಇದನ್ನೂ ಓದಿ: ಶೌಚಾಲಯಕ್ಕಾಗಿ ತಾ.ಪಂ ಎದುರು ಮಹಿಳೆಯರ ಪ್ರತಿಭಟನೆ

ಮಾದಕ ದ್ರವ್ಯ ಜಾಲದ ವಿರುದ್ಧ ಗೃಹ ಇಲಾಖೆ ಸಮರ ಸಾರಿದೆ. ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳಿಂದ ಸಣ್ಣ ಪ್ರಮಾಣದಲ್ಲಿ ಬರುವ ಮಾತ್ರೆಗಳು ಹಾಗೂ ಸೈಕೋಟ್ರೋಪಿಕ್ ಪದಾರ್ಥಗಳನ್ನು ಪತ್ತೆಹಚ್ಚಲು ಗಡಿಭಾಗಗಳಲ್ಲಿ ಹೆಚ್ಚಿನ ಟೆಸ್ಟಿಂಗ್ ಕಿಟ್‌ಗಳನ್ನು ಒದಗಿಸಲಾಗುವುದು. ವಿದೇಶಿ ಪ್ರಜೆಗಳ ಕಾನೂನುಬಾಹಿರ ವಾಸ್ತವ್ಯ ತಡೆಯುವುದು ಹಾಗೂ ಗಡಿಪಾರು ಪ್ರಕ್ರಿಯೆಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. ಈ ಇಡೀ ನಿಯಂತ್ರಣ ಪ್ರಕ್ರಿಯೆಗೆ ಜಾಗತಿಕ ಮಟ್ಟದ ಅತ್ಯುತ್ತಮ ಮಾದರಿಗಳನ್ನು ಅಧ್ಯಯನ ಮಾಡಿ, ಮುಂದಿನ ಎರಡು ವಾರಗಳಲ್ಲಿ ಸಮಗ್ರ ನೀಲ ನಕ್ಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಶೌಚಾಲಯಕ್ಕಾಗಿ ತಾ.ಪಂ ಎದುರು ಮಹಿಳೆಯರ ಪ್ರತಿಭಟನೆ
Next: ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯ ಉಜ್ವಲ: ಸತೀಶ್ ರೆಡ್ಡಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.