ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಕಣದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದ ಕಾರಣವಾಗಿ ಇದೀಗ ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ನಾಲ್ಕು ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.
ಹೌದು, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷದಿಂದ ಮೂರು ಅಭ್ಯರ್ಥಿಗಳು ಹಾಗೂ ಬಿಜೆಪಿ ಪಕ್ಷದಿಂದ ಒಬ್ಬರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರ: ಬಿವೈವಿ
ಈಗಾಗಲೇ ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ.
