ಉಡುಪಿ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೇ ತಮಿಳು ಚಿತ್ರರಂಗದ ನಟ ವಿಜಯ್ ಅವರು ರಾಜಕೀಯ ರಂಗಕ್ಕೆ ಎಂಟ್ರಿಕೊಟ್ಟು ಹೊಸ ಪಕ್ಷ ಕಟ್ಟಿ ಇದೀಗ ತಮಿಳುನಾಡಿನ ಮುಖ್ಯಮಂತ್ರಿಯಾಗಿ ತಮಿಳುನಾಡನ್ನು ಆಳುತ್ತಿದ್ದಾರೆ.
ಹೌದು, ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ ಅವರು ಕರ್ನಾಟಕದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಾಡ ದೇವತೆಗಳಲ್ಲಿ ಶಕ್ತಿ ದೇವತೆಯಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ವಿಜಯವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು; ಪ್ರಕಾಶ್ ರಾಜ್ ಹೇಳಿದ್ದೇನು?
ಈಗಾಗಲೇ ಉಡುಪಿ ಜಿಲ್ಲಾ ಆಡಳಿತವು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸುತ್ತಮುತ್ತಲು ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಾಟು ಮಾಡಲಾಗಿದ್ದು, ಇಂದು (ಶುಕ್ರವಾರ ಜೂ. 12) ಮಧ್ಯಾಹ್ನ 12 ಗಂಟೆಯಿಂದ 5 ಗಂಟೆ ಒಳಗಡೆ ಸಿಎಂ ವಿಜಯ್ ಅವರು ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ಕಾರ್ಯಕ್ರಮ ಇರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.
