ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಾಚರಣೆಯ ಯಶಸ್ವಿ ಅನುಷ್ಠಾನಕ್ಕಾಗಿ BLO ಹಾಗೂ BLA ಸಮನ್ವಯ ಸಮಿತಿ ಸಭೆ ಮತ್ತು ಸಂಪೂರ್ಣ ತರಬೇತಿ ಶಿಬಿರದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿದ್ದರು.
ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಮಹತ್ವ, ಮನೆ-ಮನೆಗೆ ಭೇಟಿ, ದಾಖಲೆ ಪರಿಶೀಲನೆ, ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸುವ ಕುರಿತು ಸಮಗ್ರ ಮಾಹಿತಿ ತಿಳಿಸಿದರು.
ಪ್ರತಿಯೊಬ್ಬ BLO ಮತ್ತು BLA ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಕ್ಷೇತ್ರದ ಪ್ರತಿಯೊಬ್ಬ ಅರ್ಹ ನಾಗರಿಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ಗಾಂಜಾ ಸಮೇತ ಸಿಕ್ಕಿಬಿದ್ದ ಮಾಡೆಲ್
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ಈ ಮಹತ್ವದ ಕಾರ್ಯದಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು, BLO ಗಳು ಹಾಗೂ BLA ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
