ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿ, ಜೋಸೆಫ್ ವಿಜಯ್ ಅವರು ಇಂದು (ಶುಕ್ರವಾರ ಜೂ. 12) ಕಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕಾ ದೇವರ ದರ್ಶನ ಪಡೆದಿದ್ದಾರೆ.
ಹೌದು, ತಮಿಳುನಾಡಿನ ಸಿಎಂ ವಿಜಯ್ ಅವರು ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿರುವ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯು ವಿಜಯವರಿಗೆ ಹೂಗುಚ್ಛ ನೀಡಿ ದೇವಸ್ಥಾನಕ್ಕೆ ಸ್ವಾಗತ ಕೋರಿದ್ದಾರೆ.
ವಿಜಯ್ ಅವರು ಸಾಂಪ್ರದಾಯಿಕ ಉಡುಪುಗಳಾದ ಶಲ್ಯ ಧರಿಸಿ ಆಗಮಿಸುವ ಮೂಲಕ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಇದನ್ನೂ ಓದಿ: ತಮಿಳುನಾಡಿನ ಸಿಎಂ ಇಂದು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ
ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್ ಪ್ರಾರ್ಥನೆ ಸಲ್ಲಿಸಿದರು. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು.
