ಬೆಂಗಳೂರು: ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ನಾಲ್ಕು ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಿಂದ ಮೂರು ಜನ ಮತ್ತು ಬಿಜೆಪಿಯಿಂದ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಇನ್ನು ಮಿಕ್ ಕುಳಿದ ಮೂರು ಅಭ್ಯರ್ಥಿಗಳು ತಮ್ಮ ಪ್ರಮಾಣ ಪತ್ರವನ್ನು ಸ್ವೀಕಾರ ಮಾಡಿದರು. ಆದರೆ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ವಿಧಾನಸೌಧಕ್ಕೆ ಧಾವಿಸಿ ತಮ್ಮ ಗೆಲುವಿನ ಪ್ರಮಾಣ ಪತ್ರವನ್ನು ಸ್ವೀಕರಿಸುತ್ತಾರೆ.
ಇಂದು (ಜೂ. 12) ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಇದನ್ನೂ ಓದಿ: ಕೊಲ್ಲೂರಿನ ಮೂಕಾಂಬಿಕಾ ದರ್ಶನ ಪಡೆದ ತಮಿಳುನಾಡಿನ ಸಿಎಂ
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
