Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಾವುದೇ ಕಾರಣಕ್ಕೂ ಕೆರೆಗೆ ಕೊಳಚೆ ನೀರು ಸೇರಬಾರದು: ಸುಷಮಾ ಗೋಡಬೋಲೆ
  • Bangalore
  • State

ಯಾವುದೇ ಕಾರಣಕ್ಕೂ ಕೆರೆಗೆ ಕೊಳಚೆ ನೀರು ಸೇರಬಾರದು: ಸುಷಮಾ ಗೋಡಬೋಲೆ

Praja Vahini June 12, 2026 1 minute read
WhatsApp Image 2026-06-12 at 15.20.06
Spread the love

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಹುಳಿಮಾವು ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ವರ್ಷಗಟ್ಟಲೆ ಕಳೆದರೂ ಕೂಡ ಕೆರೆಯ ಅಭಿವೃದ್ಧಿ ಕಾರ್ಯ ಇನ್ನೂ ಕೂಡ ಸಂಪೂರ್ಣವಾಗಿಲ್ಲ ಹಾಗಾಗಿ ತ್ವರಿತವಾಗಿ ಹುಳಿಮಾವು ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಮುಗಿಸಬೇಕು ಎಂದು ವಿಶೇಷ ಆಯುಕ್ತರಾದ ಶ್ರೀಮತಿ ಸುಷಮಾ ಗೋಡಬೋಲೆ ಅವರು ಹೇಳಿದ್ದಾರೆ.

ಕೆರೆ ಅಭಿವೃದ್ಧಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಸುಮಾರು 116 ಎಕರೆ 16 ಗುಂಟೆ ವಿಸ್ತೀರ್ಣ ಹೊಂದಿರುವ ಹುಳಿಮಾವು ಕೆರೆಯ ಅಭಿವೃದ್ಧಿ ಕಾಮಗಾರಿಗಳು ಕಳೆದ 2022ರಿಂದಲೂ ನಿರಂತರವಾಗಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ ಎಂದರು

ಅಲ್ಲದೆ, ಕೆರೆಯ ಜಾಗಕ್ಕೆ ಕೊಳಚೆ ನೀರನ್ನು ಹರಿಬಿಡುತ್ತಿರುವುದರಿಂದ ಕೆರೆ ನೀರು ಮಲಿನಗೊಂಡಿದೆ ಎಂದು ಸಾರ್ವಜನಿಕರು ವಿಶೇಷ ಆಯುಕ್ತರ ಗಮನಕ್ಕೆ ತಂದರು.

ಎಸ್‌ಟಿಪಿ ಕಾಮಗಾರಿ ಚುರುಕುಗೊಳಿಸಲು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳಿಗೆ ಸೂಚನೆ

ಬಿಡಬ್ಲ್ಯೂಎಸ್‌ಎಸ್‌ಬಿ ವತಿಯಿಂದ ನಡೆಯುತ್ತಿರುವ ಕೊಳಚೆ ನೀರು ಶುದ್ಧೀಕರಣ ಘಟಕ ಕಾಮಗಾರಿಯನ್ನು ಚುರುಕುಗೊಳಿಸಿ, ಯಾವುದೇ ಕಾರಣಕ್ಕೂ ಕೆರೆಗೆ ಕೊಳಚೆ ನೀರು ಸೇರದಂತೆ ತಡೆ ನಿರ್ಮಿಸುವಂತೆ ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳಿಗೆ ಆಯುಕ್ತರು ತಿಳಿದರು.

ಕೆರೆಯ ಸುತ್ತ ತಂತಿ ಬೇಲಿ ಅಳವಡಿಸಲು ಸೂಚನೆ

ಕೆರೆಯ ಒತ್ತುವರಿಯಾಗದಂತೆ ತಡೆಯಲು ಮತ್ತು ಸುರಕ್ಷತೆಯ ದೃಷ್ಟಿಯಿಂದ ಕೆರೆಯ ಸುತ್ತಲೂ ತಕ್ಷಣವೇ ತಂತಿ ಬೇಲಿ ಅಳವಡಿಸಬೇಕು. ಈ ಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯ ವಿವರಗಳ ಕುರಿತಂತೆ ನಾಮಫಲಕ ಅನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅರೆಕೆರೆ ಕೆರೆ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ

ಮಳೆಯಿಂದಾಗಿ ಪ್ರವಾಹ ಭೀತಿ ಎದುರಿಸುತ್ತಿರುವ ಅರೆಕೆರೆ ಕೆರೆ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ನಡೆಸಿ, ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ವಿಶೇಷ ಆಯುಕ್ತರು ಸೂಚನೆ ನೀಡಿದರು. ಇದನ್ನೂ ಓದಿ: ಪಕ್ಷ ಸಂಘಟನೆ ಬಲವರ್ಧನೆಗೆ ಸೋನಿಯಾ ಗಾಂಧಿಯರ ಮಾರ್ಗದರ್ಶನ ಪಡೆದೆ: ಬಿಕೆ ಹರಿಪ್ರಸಾದ್

ಮುಂದುವರೆದು ರಸ್ತೆ ಹಾಗೂ ರಾಜಕಾಲುವೆ ಕಾಮಗಾರಿಗಳಿಗೆ ಅಡ್ಡಿಯಾಗಿರುವ ಆಪ್ಟಿಕಲ್ ಫೈಬರ್ ಕೇಬಲ್ ಮತ್ತು ಬೆಸ್ಕಾಂನ ವಿದ್ಯುತ್ ತಂತಿಗಳನ್ನು ತಕ್ಷಣವೇ ಬೇರೆಡೆಗೆ ಸ್ಥಳಾಂತರಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಪಕ್ಷ ಸಂಘಟನೆ ಬಲವರ್ಧನೆಗೆ ಸೋನಿಯಾ ಗಾಂಧಿಯರ ಮಾರ್ಗದರ್ಶನ ಪಡೆದೆ: ಬಿಕೆ ಹರಿಪ್ರಸಾದ್
Next: ಸ್ಪಷ್ಟತೆ ಇಲ್ಲದೇ ಕೆಲಸ ಮಾಡಲು ಹೋದರೆ ತೊಂದರೆಯಾಗುತ್ತದೆ: ಕೃಷ್ಣ ಬೈರೇಗೌಡ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.