ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಪ್ರಸಿದ್ಧ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದಿದ್ದಾರೆ.
ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ ಜೂ. 13) ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ದೆಹಲಿಯಿಂದ ವಾಪಾಸ್ ಆಗ್ತಿದ್ದಂತೆ ಸಿಎಂ ಡಿಕೆಶಿ ಮಹತ್ಪದ ಸಭೆ
ಇನ್ನು ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆ ಕೆಲಕಾಲ ಸಮಾಲೋಚನೆ ನಡೆಸಿ, ಕ್ಷೇತ್ರ ಅಭಿವೃದ್ಧಿ ಹಾಗೂ ಮಾರಿಗುಡಿಯ ಇತಿಹಾಸದ ಕುರಿತು ಮಾಹಿತಿ ಪಡೆದುಕೊಂಡರು.
