Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ
  • Bangalore
  • Front news
  • Politics
  • State

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

Praja Vahini June 16, 2026
ab892458-5dba-4366-a7c3-89c0f209a3fa
Spread the love

ಬೆಂಗಳೂರು: ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಹೆಚ್ಚುವರಿ 1 ಲಕ್ಷ ಹುದ್ದೆಗಳು ಸೇರಿದಂತೆ ಒಂದೇ ಬಾರಿಗೆ 1.56 ಲಕ್ಷ ಹುದ್ದೆಗಳ ನೇಮಕ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದವು.

ಕರ್ನಾಟಕ ನಿರುದ್ಯೋಗಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಿಎಂ ಅವರನ್ನು ಸೋಮವಾರ ಭೇಟಿ ಮಾಡಿ, “ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಾಲೆಗಳಲ್ಲಿ ಖಾಲಿ ಇರುವ ಕ್ರಮವಾಗಿ 3,361, 1,861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಮೌಲಾನಾ ಆಜಾದ್‌ ಮಾದರಿ ಶಾಲೆಗಳಿಗೆ ಅನುಮೋದನೆಯಾಗಿರುವ 700 ಹುದ್ದೆಗಳನ್ನೂ ಭರ್ತಿ ಮಾಡಬೇಕು” ಎನ್ನುವ ಬೇಡಿಕೆ ಸೇರಿದಂತೆ 10 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದರು.

ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ, ದೈಹಿಕ ಶಿಕ್ಷಣ ಸಮಗ್ರ ನಿಯಮ, ನೇಮಕಾತಿ ವೇಳೆ ಅಂಕಗಳ ಪರಿಗಣನೆ, ಹಾಸ್ಟಲ್‌ ವಾರ್ಡನ್‌ ಹುದ್ದೆಗೆ ಪರಿಗಣನೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಹೆಚ್ಚುವರಿ 1 ಲಕ್ಷ ಹುದ್ದೆಗಳನ್ನು ಭರ್ತಿಗೊಳಿಸಲು ಮನವಿ

ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿ ಭೇಟಿ ಮಾಡಿ, “ಸರ್ಕಾರ ಈಗಾಗಲೇ 56 ಸಾವಿರ ಖಾಲಿ ಹುದ್ದೆಗಳ ನೇಮಕಕ್ಕೆ ಮುಂದಾಗಿದೆ. ಇದರ ಜೊತೆಗೆ ಹೆಚ್ಚುವರಿ 1 ಲಕ್ಷ ಹುದ್ದೆಗಳನ್ನು ಸೇರಿಸಿ ಈ ವರ್ಷ ಡಿಸೆಂಬರ್ ವೇಳೆಗೆ 1.56 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು, ಕೆಪಿಎಸ್‌ ಸಿ ಭ್ರಷ್ಟಾಚಾರ ಸಂಸ್ಥೆಯಾಗಿದ್ದು ಎಲ್ಲಾ ಸದಸ್ಯರ ತನಿಖೆ ನಡೆಸಬೇಕು ಮತ್ತು ಪಿಡಿಓ ನೇಮಕಾತಿ ಅಕ್ರಮ ತನಿಖೆ ಹಾಗೂ ಮರುಪರೀಕ್ಷೆ ನಡೆಸಬೇಕು” ಎಂದು ಮನವಿ ನೀಡಿದ್ದಾರೆ.

“ವಿದ್ಯುತ್‌ ಸರಬರಾಜು ಕಂಪೆನಿಗಳನ್ನು ಖಾಸಗಿಯವರ ಕೈಗೆ ಒಪ್ಪಿಸದಂತೆ” ಶಶಿಕಾಂತ್‌ ಗುರೂಜಿ ಮನವಿ ಮಾಡಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
Next: ಬಡವರ ಉದ್ಧಾರವೇ ನಿಜವಾದ ರಾಜಕಾರಣ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.