ಬೆಂಗಳೂರು: ಕರ್ನಾಟಕ ರಾಜ್ಯದಿಂದ ಈ ಬಾರಿ ರಾಜ್ಯಸಭೆಗೆ ಅವಿರೋಧವಾಗಿ ನಾಲ್ಕು ಜನ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರು ಸೇರಿದಂತೆ ಕಾಂಗ್ರೆಸ್ ನಲ್ಲಿ ಮೂರು ಅಭ್ಯರ್ಥಿಗಳು ಬಿಜೆಪಿನಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನು ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಮನ್ಸೂರ್ ಆಲಿ ಖಾನ್ ಅವರಿಗೆ ಬೊಮ್ಮನಹಳ್ಳಿಯ ಕಾಂಗ್ರೆಸ್ ಮುಖಂಡರು ಹೂಗುಚ್ಚ ನೀಡುವ ಮೂಲಕ ಅವರಿಗೆ ಶುಭ ಕೋರಿದ್ದಾರೆ. ಇದನ್ನೂ ಓದಿ: ಕುಟುಂಬದಲ್ಲಿ ಸರ್ಕಾರಿ ನೌಕರರು ಇದ್ರೆ ಇನ್ಮುಂದೆ ಗೃಹಲಕ್ಷ್ಮಿ ಹಣ ಕಟ್?
ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷರಾದ ವಾಸುದೇವ ರೆಡ್ಡಿ, ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾದ ಕೆ ವಾಸುದೇವ ರೆಡ್ಡಿ, ಕೆಪಿಸಿಸಿ ಸದಸ್ಯರುಗಳಾದ ರವೀಂದ್ರ ಗೌಡ, ಮತ್ತು ಸೈಯದ್ ಸರ್ದಾರ್, ಕಾಂಗ್ರೆಸ್ ಹಿರಿಯ ಮುಖಂಡರಾದ ಅಶ್ವತ್ ನಾರಾಯಣ್ ಸ್ವಾಮಿ, ಮತ್ತು ಇನ್ನು ಅನೇಕ ಮುಖಂಡರುಗಳು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
