ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕರ್ನಾಟಕ ರಾಜ್ಯದಲ್ಲಿ 7 ಸ್ಥಾನಗಳಿಗೆ ಪರಿಷತ್ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಡ್ಡ ಮತದಾನ ನಡೆಯುವ ಭೀತಿಯಿಂದ ಈಗಾಗಲೇ ಕಾಂಗ್ರೆಸ್ ಶಾಸಕರನ್ನ ಬಿಡದಿ ಹಾಗೂ ವಂಡರ್ಲಾ ರೆಸಾರ್ಟ್ ನಲ್ಲಿ ಕಳೆದ ಎರಡು ದಿನಗಳಿಂದ ಸಭೆಗಳ ಮೇಲೆ ಸಭೆ ನಡೆಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲಾ ಶಾಸಕರ ಗಮನ ಸೆಳೆದಿದ್ದರು.
ಇಂದು ಮತದಾನ ಹಿನ್ನೆಲೆ ಪ್ರಯುಕ್ತ ವಂಡರ್ ಲಾ ರೆಸಾರ್ಟ್ ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರನ್ನ ವಿಶೇಷ ಬಸ್ಗಳಲ್ಲಿ ನೇರವಾಗಿ ವಿಧಾನಸೌಧಕ್ಕೆ ಕರಿತರಲಾಗಿದೆ.
ಹೌದು, ಇಂದು (ಗುರುವಾರ ಜೂ 18) ವಿಧಾನ ಪರಿಷತ್ ಚುನಾವಣೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಇನ್ನು ಕಾಂಗ್ರೆಸ್ ಪಕ್ಷಕ್ಕೆ ತನ್ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿದ್ದು, ಯಾವುದೇ ಒಂದು ಮತವೂ ಅಸಿಂಧುವಾಗದಂತೆ ನೋಡಿಕೊಳ್ಳಲು ನಿನ್ನೆ ರಾತ್ರಿ ರೆಸಾರ್ಟ್‌ನಲ್ಲಿ ಶಾಸಕರಿಗೆ ಮತದಾನ ವಿಧಾನ ಕುರಿತು ವಿಶೇಷ ತರಬೇತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಬಿರನೂರ ಗ್ರಾಮಸ್ಥರು ಅಸ್ವಸ್ಥ2
ಹಾಗಾದ್ರೆ ಇಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲೋರು ಯಾರು ಎಂಬುದು ಕುತೂಹಲ ಕೆರಳಿಸಿದೆ.
