ಕಲಬುರಗಿ: ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಗ್ರಾಮಕ್ಕೆ ಮೂರನೇ ಬಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಡಾ.ಶರಣಪ್ರಕಾಶ ಪಾಟೀಲ ರವರಿಗೆ ಸುಲೇಪೇಟ ಸೇರಿದಂತೆ ಹೊಡೆಬಿರನ್ನಳಿ, ಗರಗಪಳ್ಳಿ, ಪೆಂಚನಪಳ್ಳಿ, ಬೆಡಕಪಳ್ಳಿ ಸೇರಿದಂತೆ ಅನೇಕ ಗ್ರಾಮ ಹಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು ಅಧ್ದೂರಿಯಾಗಿ ಕ್ರೇನ್ ಮೂಲಕ ಹೂವಿನ ಮಾಲೆ ಹಾಕುವ ಮೂಲಕ ಸ್ವಾಗತಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಭಾಗಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ
ಈ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್ ಕರ್ತರು ಸೇರಿದಂತೆ ಸುತ್ತಮುತ್ತಲಿನ 10 ಹಳ್ಳಿಯ ನೂರಾರು ಜನ ಸೇರಿದ್ದರು.
