Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸ್ ಟಿಕೆಟ್ ದರ ಏರಿಕೆ; ಜನರ ಹಿತದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ: ಡಿಕೆಶಿ
  • Uncategorized

ಬಸ್ ಟಿಕೆಟ್ ದರ ಏರಿಕೆ; ಜನರ ಹಿತದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ: ಡಿಕೆಶಿ

Praja Vahini June 20, 2026 1 minute read
WhatsApp Image 2026-06-20 at 16.37.57
Spread the love

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು ಪ್ರಜಾಸೇವೆ ಇಲಾಖೆಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿವಹಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಇಂದು (ಶನಿವಾರ ಜೂ. 20) ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜನರ ಕಷ್ಟ ಭಾವನೆಗಳನ್ನು ಅರಿತು, ಕಾನೂನು ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಸರ್ಕಾರದ ಗುರಿ. ಹೀಗಾಗಿ ಈ ಇಲಾಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುವುದು. ಅವರು ಎಲ್ಲಾ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಮಾಹಿತಿ ನೀಡುವ ಕೆಲಸ ಮಾಡಲಾಗುವುದು. ಈ ಮೂಲಕ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಿದೆ. ನನಗೆ ಹಾಗೂ ಇತರೇ ಸಚಿವರಿಗೆ ನೀಡಿದ ಮನವಿಗಳನ್ನು ಈ ಇಲಾಖೆ ಅಡಿಯಲ್ಲಿ ತರಲು ಆಲೋಚಿಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರಿಯ ಜಿಲ್ಲೆಯ ಕ್ಷೇತ್ರಗಳಲ್ಲಿ ವಾರಕ್ಕೆ ಒಮ್ಮೆ ಸ್ಥಳೀಯ ಶಾಸಕರೊಂದಿಗೆ ಈ ಇಲಾಖೆ ಮೂಲಕ  ಜನಸ್ಪಂದನ ಸಭೆಗಳನ್ನು ನಡೆಸಬೇಕು. ಆನಂತರ ಅದನ್ನು ಪರಿಶೀಲಿಸುವ ಕೆಲಸ ಮಾಡಲಾಗುವುದು” ಎಂದರು.

ವಿದ್ಯುತ್ ಸಂಪರ್ಕ ಪಡೆಯಲು 15 ದಿನಗಳ ಕಾಲಾವಕಾಶ

31.05.2026 ರ ಒಳಗೆ ಪೂರ್ಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ವಿನಾಯಿತಿ ನೀಡಲಾಗಿದ್ದು, ಈ ವಿಚಾರವಾಗಿ ಸರ್ಕಾರಿ ಆದೇಶ ಬಂದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗುವುದು. ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಫೋಟೋ ಹಾಗೂ ಜಿಪಿಎಸ್ ದಾಖಲೆ ಕಡ್ಡಾಯವಾಗಿ ಸಲ್ಲಿಕೆ ಮಾಡಬೇಕು ಎಂದರು. ಇದನ್ನೂ ಓದಿ: ಓಟಿನ ರಾಜಕೀಯ ಮಾಡಬೇಡಿ: ಆರ್.ಅಶೋಕ್

ಗ್ರಾಮೀಣ ಭಾಗದ, ರೇಷ್ಮೆ ಸಾಕಾಣಿಕೆ ಮನೆ, ಕೊಟ್ಟಿಗೆಗಳಿಗೆ ವಿನಾಯಿತಿ ನೀಡಲಾಗಿದೆ. ಹೊಸದಾಗಿ ನಿರ್ಮಾಣ ಮಾಡಿದರೆ ಅವಕಾಶವಿಲ್ಲ. ಇಂಧನ ಸಚಿವರು, ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ ಸಚಿವರ ಬಳಿ ಇದರ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮೋದನೆ

ಯಾದಗಿರಿಯ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ100 ಕೋಟಿ ರೂ. ವೆಚ್ಚದಲ್ಲಿ ನೂತನ 200 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 18 ಕೋಟಿ ರೂ. ವೆಚ್ಚದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ ಆರು ಸಿವಿಲ್ ಕಾಮಗಾರಿಗಳಿಗೆ ಮತ್ತು ಬೆಂಗಳೂರು ವೈದ್ಯಕೀಯ ಸಂಶೋಧನಾ ಆಸ್ಪತ್ರೆಗೆ ಸುಮಾರು 60 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆ” ಎಂದು ಮಾಹಿತಿ ನೀಡಿದರು.

620 ಬಸ್ ಖರೀದಿಗೆ ಅನುಮೋದನೆ

“620 ನೂತನ ಬಸ್ ಗಳ ಖರೀದಿಗೆ 235 ಕೋಟಿ ರೂ. ವೆಚ್ಚ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ಅಡಿಯಲ್ಲಿ 11 ಕಡೆ ಎಲೆಕ್ಟ್ರಿಕ್ ಬಸ್ ಗಳ ಡಿಪೋಗಳನ್ನು ತೆರೆಯಲು 112 ಕೋಟಿ ವೆಚ್ಚ ಮಾಡಲಾಗುವುದು. 30 ಕೋಟಿ ರೂ. ವೆಚ್ಚದಲ್ಲಿ ಸಂಡೂರು ತಾಲ್ಲೂಕು ಕೇಂದ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ. 620 ಬಸ್ ಗಳ ಪೈಕಿ ಗ್ರಾಮೀಣ ಪ್ರದೇಶಗಳಿಗೆ 400 ಬಸ್ ಗಳು ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ 220 ಬಸ್ ಗಳ ಖರೀದಿಗೆ ಅನುಮತಿ ನೀಡಲಾಗಿದೆ” ಎಂದರು.

ಕರ್ನಾಟಕದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ

ಯುಪಿಎಸ್ ಸೇರಿದಂತೆ ಇತರೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಒಂದೇ ಸೂರಿನಡಿ ಎಲ್ಲಾ ಅನುಕೂಲ ದೊರೆಯಬೇಕು ಎನ್ನುವ ಕಾರಣಕ್ಕೆ ಕೆಐಡಬ್ಲ್ಯೂಬಿ ವತಿಯಿಂದ ನವ ದೆಹಲಿಯಲ್ಲಿ ಕರ್ನಾಟಕ ಭವನ 4 ಅನ್ನು ನಿರ್ಮಾಣ ಮಾಡಲು 80 ಕೋಟಿಗೆ ಅನುಮೋದನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡ ಹಾಗೂ ಶೇ 50, ಇತರೇ ಸಮುದಾಯದ ವಿದ್ಯಾರ್ಥಿಗಳಿಗೆ ಶೇ 50 ರಷ್ಟು ಮೀಸಲು ಇಡಲಾಗಿದೆ” ಎಂದರು.

About the Author

Praja Vahini

Editor

View All Posts

Spread the love

Post navigation

Previous: ಓಟಿನ ರಾಜಕೀಯ ಮಾಡಬೇಡಿ: ಆರ್.ಅಶೋಕ್
Next: ಬಿಕೆ ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದು ಮನದಾಳದ ಮಾತು

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.