ಬೆಂಗಳೂರು: ಕರ್ನಾಟಕ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಅವರು ನಿನ್ನೆ (ಭಾನುವಾರ ಜುಲೈ 21) ರಂದು ಅದ್ದೂರಿಯಾಗಿ ಪದಗ್ರಹಣ ಮಾಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು ನಡೆದ ಕಾರ್ಯಕ್ರಮದಲ್ಲಿ ನಾನೇ ಕೊನೆಯ ಭಾಷಣಕಾರ ಇನ್ಮುಂದೆ ನನ್ನನ್ನ ಕೊನೆಯ ಭಾಷಣಕಾರ ಮಾಡಬೇಡಿ ಎಂದು ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಇಷ್ಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಕುರಿತಾಗಿ ಹಲವಾರು ಹೋರಾಟಗಳನ್ನ ಮಾಡಿ ಪಕ್ಷವನ್ನ ಮುಂದುವರಿಸುವ ಕೆಲಸವನ್ನು ಮಾಡಿದ್ದಾರೆ. ಇಷ್ಟು ದಿನ ಡಿಕೆ ಶಿವಕುಮಾರ್ ಅವರಿಗೆ ಹೇಗೆ ಬೆಂಬಲ ನೀಡಿದ್ದೀರಿ ಹಾಗೆಯೇ ಬಿಕೆ ಹರಿಪ್ರಸಾದ್ ಅವರಿಗೂ ಕೂಡ ಬೆಂಬಲ ನೀಡಿ ಎಂದು ಹೇಳಿದರು. ಇದನ್ನೂ ಓದಿ: ಬಸ್ ಟಿಕೆಟ್ ದರ ಏರಿಕೆ; ಜನರ ಹಿತದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ: ಡಿಕೆಶಿ
ರಾಜ್ಯದಲ್ಲಿ ನಾನು ವಿರೋಧ ಪಕ್ಷದ ನಾಯಕನಾಗಿ, ಸಿಎಂ ಆಗಿ ರಾಜ್ಯದ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದ್ದೇನೆ. ಗ್ಯಾರಂಟಿ ಜಾರಿ ಮಾಡಿದರೆ ಖಜಾನೆ ಖಾಲಿಯಾಗುತ್ತೆ ಅಂತ ವಿರೋಧ ಪಕ್ಷದವರು ಟೀಕೆ ಮಾಡ್ತಿದರು. ಇದಕ್ಕೆಲ್ಲಾ ಗಮನ ಕೊಡದೆ ಎಲ್ಲಾ ಗ್ಯಾರಂಟಿ, ಭರವಸೆಗಳನ್ನ ಈಡೇರಿಸಿದ್ದೇವೆ. ಡಿಕೆ ಶಿವಕುಮಾರ್ ಅವರು ಹೆಗಲು ಕೊಟ್ಟು ದುಡಿದಿದ್ದಾರೆ. ನಾವು ಅನೇಕ ಹೋರಾಟಗಳನ್ನ ಮಾಡಿ ಪಕ್ಷ ಸಂಘಟನೆ ಮಾಡಿ. 2023 ರಲ್ಲಿ ಶಿವಕುಮಾರ್ ಅಧ್ಯಕ್ಷರಾಗಿ, ನಾನು ವಿರೋಧ ಪಕ್ಷದ ನಾಯಕನಾಗಿ 134 ಸ್ಥಾನ ಗೆದ್ದಿದ್ವು. ಇದಕ್ಕೆ ನೀವೆಲ್ಲಾ ಕಾರಣ ಎಂದು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
