ಬಾಗಲಕೋಟೆ: ಕನ್ನಡ ಚಿತ್ರರಂಗದ ನಟ ಚೇತನ್ ಅಹಿಂಸ ಅವರು ಈಗಾಗಲೇ ಹಲವಾರು ವಿಷಯಗಳಿಗೆ ಸುದ್ದಿಯಾಗಿರುವ ಅವರು ಇದೀಗ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾರೆ.
ಹೌದು, ರಾಜ್ಯದಲ್ಲಿ ಹೊಸ ರಾಜಕೀಯ ಪಕ್ಷ ಕಟ್ಟುವುದಾಗಿ ನಟ ಚೇತನ ಅವರು ಘೋಷಿಸಿದ್ದಾರೆ.
ಈ ಕುರಿತು ಇಂದು (ಜೂ. 22) ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ ಸಂಘಟನೆಗಳು, ಬಹುಜನ ಸಂಘಟನೆಗಳು ಸೇರಿದಂತೆ ಎಲ್ಲ ಸಂಘಟನೆಗಳನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. 224 ಕ್ಷೇತ್ರದಲ್ಲೂ ಪಕ್ಷ ಸಂಘಟನೆ ಮಾಡುತ್ತೇವೆ. 2027ರ ಜನವರಿ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಪಕ್ಷದ ಹೆಸರು, ಪಕ್ಷದ ಚಿನ್ಹೆ ಪಕ್ಷದ ಪ್ರಣಾಳಿಕೆ, ಪಕ್ಷದ ಧ್ವಜ ರಾಜ್ಯ ಸಮಿತಿ ರಚನೆ, ಇನ್ನಿತರೆ ವಿಚಾರಗಳ ಘೋಷಣೆ ಮಾಡಲಿದ್ದೇವೆ ಎಂದು ಚೇತನ್ ಅಹಿಂಸ ಹೇಳಿದ್ದಾರೆ. ಇದನ್ನೂ ಓದಿ: ಬಿಕೆ ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದು ಮನದಾಳದ ಮಾತು
ಸಮ ಸಮಾಜ ಕಟ್ಟುವುದು ನಮ್ಮ ಮುಖ್ಯ ಉದ್ದೇಶ. ಅದಕ್ಕಾಗಿಯೇ ಪಕ್ಷದ ಹೆಸರಿನಲ್ಲಿ ಸಂವಿಧಾನದ ಪದಗಳಿರಲಿವೆ. ನಾವು ಪಕ್ಷವನ್ನು ರಿಜಿಸ್ಟರ್ ಮಾಡುವ ಪ್ರಕ್ರಿಯೆಯಲ್ಲಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ ಎಂದ ಚೇತನ್ ಅಹಿಂಸ, ಪಕ್ಷದ ಪ್ರಣಾಳಿಕೆಯ 10 ಅಂಶಗಳು ಇವೆ ಎಂದು ತಿಳಿಸಿದ್ದಾರೆ.
