Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪರಿಶುದ್ಧ, ಜನಪರ ಮತ್ತು ಸಮಾನತೆಯ ಆಡಳಿತವೇ ನನ್ನ ಗುರಿ: ಸಿಎಂ ಡಿಕೆಶಿ
  • Politics
  • State
  • ಕಲಬುರಗಿ

ಪರಿಶುದ್ಧ, ಜನಪರ ಮತ್ತು ಸಮಾನತೆಯ ಆಡಳಿತವೇ ನನ್ನ ಗುರಿ: ಸಿಎಂ ಡಿಕೆಶಿ

Praja Vahini July 7, 2026
Screenshot_2026-07-07-20-37-54-94_a23b203fd3aafc6dcb84e438dda678b6
Spread the love

ಕಲಬುರಗಿ: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.

ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.

ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ ಮತ್ತು ಕಟ್ಟಕಡೆಯ ವ್ಯಕ್ತಿಗೂ ಅವರ ನಾಗರಿಕ ಹಕ್ಕುಗಳನ್ನು ತಲುಪಿಸುವುದು ನನ್ನ ಸರ್ಕಾರದ ಪ್ರಮುಖ ಗುರಿ. ಈ ಗುರಿ ಸಾಧಿಸಲು ಅಧಿಕಾರಿ ವರ್ಗ ಅತ್ಯಂತ ಕ್ರಿಯಾಶೀಲ, ಜನಪರ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ನಾನು ಬಸವಾದಿ ಶರಣರ ಸಮಾನತೆಯ ತತ್ವವನ್ನು ನಂಬುವವನು. ಆದ್ದರಿಂದಲೇ ನನ್ನ ಮೊದಲ ಉತ್ತರ ಕರ್ನಾಟಕ ಪ್ರವಾಸವನ್ನು ಬಸವಕಲ್ಯಾಣದಿಂದ ಆರಂಭಿಸಿದ್ದೇನೆ. ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಒಂದೇ ವೇಗದಲ್ಲಿ ಸಾಗಬೇಕು” ಎಂದು ಹೇಳಿದರು.

ಬೀದರ್, ಕಲ್ಬುರ್ಗಿ ಜಿಲ್ಲೆಯ ಜನತೆ ನೀಡಿರುವ ಅಭೂತಪೂರ್ವ ಬೆಂಬಲ, ಪ್ರೀತಿ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, “ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ನಮ್ಮನ್ನು ಈ ಸ್ಥಾನದಲ್ಲಿ ಕೂರಿಸಿರುವವ ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ” ಎಂದರು.

ಆಡಳಿತದ ಅನುಭವವನ್ನು ಹಂಚಿಕೊಂಡ ಅವರು, “ನಾನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಾಗಿ ಕೆಲಸ ಆರಂಭಿಸಿ ಮುಖ್ಯಮಂತ್ರಿ ಹುದ್ದೆಯವರೆಗೆ ಎಲ್ಲಾ ಹಂತಗಳನ್ನು ದಾಟಿಕೊಂಡು ಬಂದಿದ್ದೇನೆ. ಹೀಗಾಗಿ ಆಡಳಿತದ ಪ್ರತಿಯೊಂದು ಹಂತದಲ್ಲಿ ಏನು ನಡೆಯುತ್ತದೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ನೆಪಗಳನ್ನು ಕೇಳಲು ನಾನು ಸಿದ್ಧನಿಲ್ಲ. ನನಗೆ ಫಲಿತಾಂಶವೇ ಮುಖ್ಯ” ಎಂದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದರು.

“ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿದ್ದರೆ ನಾಡಿನ ಜನತೆಯ ಋಣ ತೀರಿಸಿದಂತಾಗುತ್ತದೆ. ಆದರೆ ಜನಪರವಾಗಿ ಕೆಲಸ ಮಾಡದಿದ್ದರೆ,ಲ್ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದು ನನಗೆ ಅನಿವಾರ್ಯವಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾತನಾಡಿದ ಮುಖ್ಯಮಂತ್ರಿಯವರು, “ಒಬ್ಬನೇ ಒಬ್ಬ ಅರ್ಹ ಮತದಾರ ತನ್ನ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಇಲ್ಲಿ ರಾಜಕಾರಣ ಮುಖ್ಯವಲ್ಲ, ಆದರೆ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಬಿಎಲ್ಒಗಳು ಪ್ರತಿಯೊಂದು ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಅರ್ಹ ಮತದಾರರ ಹೆಸರನ್ನು ಉಳಿಸುತ್ತಾರೆಯೇ ಎಂಬುದರ ಮೇಲೆ ನಿಗಾ ವಹಿಸಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ” ಎಂದು ಸೂಚಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಹಾವೇರಿ: ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಬೊಮ್ಮಾಯಿ
Next: ಟಾಕ್ಸಿಕ್ ಚಿತ್ರದ ತಬಾಹಿ ಹಾಡು ರಿಲೀಸ್; ಯಶ್ ಸಿಕ್ಸ್ ಪ್ಯಾಕ್ ನೋಡಿ ಅಭಿಮಾನಿಗಳು ಫಿದಾ!

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.