Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ: ಡಿ.ಕೆ. ಶಿ
  • Politics
  • State
  • ಬೆಳಗಾವಿ

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ₹1 ಕೋಟಿ ಬಿಡುಗಡೆಗೆ ಆದೇಶ: ಡಿ.ಕೆ. ಶಿ

Praja Vahini July 9, 2026 1 minute read
WhatsApp Image 2026-07-09 at 17.48.57
Spread the love

ಬೆಳಗಾವಿ: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರ ನಿರ್ವಹಣೆ, ಕುಡಿಯುವ ನೀರು, ಕೃಷಿ, ಮೂಲಸೌಕರ್ಯ, ಅರಣ್ಯ ಅನುಮತಿಗಳು, ರಸ್ತೆ ಕಾಮಗಾರಿಗಳು, ಮುಜರಾಯಿ ದೇವಸ್ಥಾನಗಳ ಭದ್ರತೆ ಹಾಗೂ ಆಡಳಿತದ ಜವಾಬ್ದಾರಿಗಳ ಕುರಿತು ಮಹತ್ವದ ನಿರ್ದೇಶನಗಳನ್ನು ನೀಡಿದರು.

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ತುರ್ತು ಸಮಸ್ಯೆ ಪರಿಹರಿಸಲು ತಲಾ ₹1 ಕೋಟಿ ಬಿಡುಗಡೆ ಮಾಡಲು ಸಭೆಯಲ್ಲೇ ಆದೇಶಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಯಾವುದೇ ಗ್ರಾಮ ನಿರ್ಲಕ್ಷ್ಯಕ್ಕೆ ಒಳಗಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ನೀರಿನ ಬಿಕ್ಕಟ್ಟನ್ನು ಎದುರಿಸಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ. ಅಗತ್ಯವಿದ್ದರೆ ಹೆಚ್ಚುವರಿ ಅನುದಾನವೂ ಬಿಡುಗಡೆ ಮಾಡಲಾಗುವುದು. ಜನರಿಗೆ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ” ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿಗಳ ವಿಪತ್ತು ನಿರ್ವಹಣಾ ನಿಧಿಯಲ್ಲಿ ಈಗಾಗಲೇ ಲಭ್ಯವಿರುವ ಅನುದಾನವನ್ನು ತಕ್ಷಣ ಬಳಸುವಂತೆ ಸೂಚಿಸಿದ ಅವರು, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಲಭ್ಯವಿರುವ ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿ, ಅಗತ್ಯವಿದ್ದರೆ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯುವಂತೆ ತಿಳಿಸಿದರು.

ನೀರಿನ ದೀರ್ಘಕಾಲೀನ ಭದ್ರತೆಗೆ ಹೂಳು ತೆಗೆಯುವುದು, ಮಳೆ ನೀರು ಸಂಗ್ರಹಣೆ, ಕೆರೆಗಳ ಪುನಶ್ಚೇತನ ಹಾಗೂ ಪೈಪ್‌ಲೈನ್ ವಿಸ್ತರಣೆ ಸೇರಿದಂತೆ ಸಮಗ್ರ ಜಲಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ ಮುಖ್ಯಮಂತ್ರಿ, ಕುಡಿಯುವ ನೀರಿನ ಯೋಜನೆಗಳಿಗೆ ಅರಣ್ಯ ಇಲಾಖೆಯ ಅನುಮತಿಗಳು ಅನಗತ್ಯವಾಗಿ ವಿಳಂಬವಾಗಬಾರದು ಎಂದು ನಿರ್ದೇಶನ ನೀಡಿದರು. ಶಾಲೆಗಳು ಹಾಗೂ ಕುಡಿಯುವ ನೀರಿನ ಸಂಪರ್ಕಗಳಿಗೆ ಸಂಬಂಧಿಸಿದ ಅರಣ್ಯ ಅನುಮೋದನೆಗಳನ್ನು ಆದ್ಯತೆಯ ಮೇಲೆ ಇತ್ಯರ್ಥಗೊಳಿಸಬೇಕು ಎಂದರು.

ಶಾಸಕರು ಪ್ರಸ್ತಾಪಿಸಿರುವ ಸ್ಥಗಿತಗೊಂಡ ಬೋರ್‌ವೆಲ್‌ಗಳು, ವಿದ್ಯುತ್ ಸಂಪರ್ಕ ಹಾಗೂ ಪೈಪ್‌ಲೈನ್ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದು ಜಿಲ್ಲಾಧಿಕಾರಿಗಳ ನೇರ ಜವಾಬ್ದಾರಿ ಎಂದು ತಿಳಿಸಿದ ಅವರು, “ಈ ವಿಷಯದಲ್ಲಿ ಮತ್ತೆ ಶಾಸಕರಿಂದ ದೂರುಗಳು ಬರಬಾರದು” ಎಂದು ಎಚ್ಚರಿಸಿದರು.

ಬೆಳೆವಿಮೆ ಯೋಜನೆಯಲ್ಲಿ ಅಕ್ರಮಗಳ ಕುರಿತು ವ್ಯಾಪಕ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ವರದಿ ಪಡೆದು ಪ್ರತ್ಯೇಕ ಪರಿಶೀಲನಾ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಬೆಳಗಾವಿ ವಿಭಾಗದ ಅಭಿವೃದ್ಧಿ ಕುರಿತು ಮಾತನಾಡಿದ ಅವರು, “ನಮ್ಮ ಗಮನ ಕೇವಲ ಬರ ನಿರ್ವಹಣೆ ಅಥವಾ ನೀರಾವರಿಯ ಮೇಲಷ್ಟೇ ಇಲ್ಲ. ಬೆಳಗಾವಿ ವಿಭಾಗದ ಸಮಗ್ರ, ಸಮತೋಲನ ಮತ್ತು ಸುಸ್ಥಿರ ಅಭಿವೃದ್ಧಿಯೇ ನಮ್ಮ ಗುರಿ. ಅಧಿಕಾರಿಗಳು ಸಮಸ್ಯೆಗಳ ಪಟ್ಟಿ ಮಾಡುವುದಕ್ಕಿಂತ ಪರಿಹಾರದ ಮಾರ್ಗಗಳನ್ನು ಸರ್ಕಾರಕ್ಕೆ ಸೂಚಿಸಬೇಕು” ಎಂದು ಹೇಳಿದರು.

ಸರ್ಕಾರಿ ಕಾಮಗಾರಿಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿದ ಮುಖ್ಯಮಂತ್ರಿ, ಯಾವುದೇ ರಸ್ತೆ ಕಾಮಗಾರಿ ಆರಂಭಕ್ಕೂ ಮುನ್ನ, ಕಾಮಗಾರಿ ನಡೆಯುವ ವೇಳೆ ಹಾಗೂ ಪೂರ್ಣಗೊಂಡ ನಂತರದ ಛಾಯಾಚಿತ್ರ ಮತ್ತು ವಿಡಿಯೊ ದಾಖಲಾತಿ ಕಡ್ಡಾಯವಾಗಬೇಕು ಎಂದು ಸೂಚಿಸಿದರು. “ಒಂದೇ ರಸ್ತೆಗೆ ವಿವಿಧ ಇಲಾಖೆಗಳು ಅಥವಾ ವಿವಿಧ ಯೋಜನೆಗಳ ಹೆಸರಿನಲ್ಲಿ ಬಿಲ್ ಸಲ್ಲಿಸಿ ವಂಚನೆ ಮಾಡಿದರೆ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದರು.

ಕುಡಿಯುವ ನೀರಿನ ಯೋಜನೆಗಳ ಗುಣಮಟ್ಟ ಹಾಗೂ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ಆಡಿಟ್ ನಡೆಸಲಾಗುವುದು ಎಂದು ತಿಳಿಸಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಗುಣಮಟ್ಟಕ್ಕೆ ಯಾವುದೇ ರಾಜಿ ಇರಬಾರದು ಎಂದರು.

ಮುಜರಾಯಿ ದೇವಸ್ಥಾನಗಳ ಭದ್ರತೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ದೇವಸ್ಥಾನಗಳ ನಿಧಿಯನ್ನು ಸುರಕ್ಷಿತವಾಗಿಡಲು ಹಾಗೂ ದುರುಪಯೋಗವನ್ನು ತಡೆಯಲು ಜಿಲ್ಲಾಧಿಕಾರಿಗಳು ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಎಲ್ಲಾ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಸಮರ್ಪಕ ಭದ್ರತೆ ಒದಗಿಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧೀಕ್ಷಕರದ್ದಾಗಿದೆ ಎಂದು ಹೇಳಿದರು. ಧಾರ್ಮಿಕ ದೇಣಿಗೆಗಳ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವುದು ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ರಾಜ್ಯ ಸರ್ಕಾರ ಮತ್ತೊಂದು ಟೌನ್​​​ಶಿಪ್ ಮಾಡಲು ನಿರ್ಧಾರ!
Next: ಪಿ.ತ್ಯಾಗರಾಜ್ ಸಿಎಂ ಮಾಧ್ಯಮ ಕಾರ್ಯದರ್ಶಿಯಾಗಿ ನೇಮಕ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.