Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು: ಸಿಎಂ ಡಿಕೆಶಿ
  • Bangalore
  • Politics
  • State

ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು: ಸಿಎಂ ಡಿಕೆಶಿ

Praja Vahini July 11, 2026 1 minute read
WhatsApp Image 2026-07-11 at 16.12.20
Spread the love

ಬೆಂಗಳೂರು: ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿಇಂದು (ಶನಿವಾರ ಜು.11) ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

ಇದು ನಮ್ಮ ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬಲಾಗುತ್ತಿದೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ. ನಿಮಗೆ ಸರ್ಕಾರದ ಪರವಾಗಿ ಅಭಿನಂದನೆಗಳು. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ ಎಂದರು.

ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬ ನಾಗರಿಕನೂ ಇಲಾಖೆ ಮೇಲೆ ಗೌರವ ಇಟ್ಟುಕೊಳ್ಳುವಂತೆ ಕೆಲಸ ಮಾಡಬೇಕು. ನಿಮ್ಮ ಯಶಸ್ಸೇ ಸರ್ಕಾರದ ಯಶಸ್ಸು” ಎಂದು ತಿಳಿಸಿದರು. ಇದನ್ನೂ ಓದಿ: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ

ಇತ್ತೀಚೆಗೆ ಕೇರಳ ಗೃಹಸಚಿವರಾದ ರಮೇಶ್ ಚೆನ್ನಿತ್ತಾಲ ಅವರು ನನ್ನನ್ನ ಭೇಟಿ ಮಾಡಿ ಕರ್ನಾಟಕ ಗಡಿ ದಾಟಿ ಯಾವುದೇ ಮಾದಕ ವಸ್ತು ಕೇರಳ ಗಡಿ ಮೂಲಕ ಹೋಗಬಾರದು ಎಂಬ ವಿಚಾರವಾಗಿ ಕೆಲವು ಮಾಹಿತಿ ಹಾಗೂ ಮನವಿ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಮಾದಕ ವಸ್ತು ಬರದಂತೆ ತಡೆಯಲಾಗುವುದು ಎಂದು ಅವರಿಗೆ ಆಶ್ವಾಸನೆ ನೀಡಿದ್ದೇನೆ ಎಂದು ತಿಳಿಸಿದರು.

ನಮ್ಮ ಪೊಲೀಸ್ ಇಲಾಖೆಗೆ ದೇಶದಲ್ಲೇ ದಕ್ಷ ಇಲಾಖೆ ಎಂದು ಹೆಸರು ಪಡೆದಿದೆ. ಪೊಲೀಸ್ ಸಿಬ್ಬಂದಿಗಳ ಪರಿಶ್ರಮ, ನಿಷ್ಠೆ, ಕಾರ್ಯಕ್ಷಮತೆಯಿಂದ ಈ ಹೆಸರು ಬಂದಿದೆ. ಹಗಲು ರಾತ್ರಿ ನಿಮ್ಮ ಸೇವೆಗೆ ಸರ್ಕಾರ ನಿಮ್ಮ ಪರವಾಗಿ ನಿಲ್ಲಲಿದೆ. ಕೆಲವು ಸಂದರ್ಭದಲ್ಲಿ ಅನಾಹುತಗಳು ಆಗುತ್ತವೆ. ಅಂತಹ ಪರಿಸ್ಥಿತಿಯಲ್ಲೂ ನಾನು ಹಾಗೂ ನಮ್ಮ ಸರ್ಕಾರ ನಿಮ್ಮ ಆತ್ಮಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಲಾಗಿದೆ. ಕಾನೂನು ಕಾಯುತ್ತೀರಿ, ಸಮಾಜದ ಹಿತ ಕಾಪಾಡುತ್ತೀರಿ. ಅಪರಾಧಗಳಲ್ಲಿ ವಿವಿಧ ರೂಪಗಳಿವೆ. ತಂತ್ರಜ್ಞಾನ, ಎಐ ಬಂದ ಬಳಿಕ ಅಪರಾಧ ಪತ್ತೆಹಚ್ಚಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಗೂಂಡಾಗಿರಿ ತಡೆಗಟ್ಟಲು, ಎಲ್ಲಾ ಠಾಣೆಗಳಲ್ಲಿ ಪಡೆ ರಚಿಸಲು ನಿರ್ದೇಶನ ನೀಡಿದ್ದೇನೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ
Next: ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭಾರೀ ಯಶಸ್ಸು: ಪ್ರಿಯಾಂಕ್ ಖರ್ಗೆ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.