Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರದ ಮುಂದಾಗಿದೆ: ಬಿಎಸ್. ಯಡಿಯೂರಪ್ಪ
  • Bangalore
  • Politics
  • State

ರಿಯಲ್ ಎಸ್ಟೇಟ್ ದಂಧೆಗೆ ರಾಜ್ಯ ಸರ್ಕಾರದ ಮುಂದಾಗಿದೆ: ಬಿಎಸ್. ಯಡಿಯೂರಪ್ಪ

Praja Vahini July 17, 2026
WhatsApp Image 2026-07-17 at 19.39.58
Spread the love

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಸ್ಪಂದಿಸದೆ, ಅಧಿಕಾರ ಮದ ಹಾಗೂ ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಡದಿ ಭಾಗದಲ್ಲಿ ರೈತರ ಫಲವತ್ತಾದ ಜಮೀನನ್ನು ಕಿತ್ತುಕೊಂಡು ಟೌನ್ ಶಿಪ್ ಮಾಡಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಸರ್ಕಾರಿ ಜಮೀನುಗಳು ಲಭ್ಯವಿದ್ದರೂ ಕೇವಲ ರಿಯಲ್ ಎಸ್ಟೇಟ್ ದಂಧೆ ಹಾಗೂ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ಬಡ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.

ವಿಮಾನ ನಿಲ್ದಾಣದ ರಾಜಕೀಯ

ಎರಡನೇ ವಿಮಾನ ನಿಲ್ದಾಣವನ್ನು ಪೂರ್ವ ಭಾಗದಲ್ಲಿ ನಿರ್ಮಿಸಿದರೆ ಮಧ್ಯ ಹಾಗೂ ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗುತ್ತದೆ. ಅಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದರೂ, ಕೇವಲ ರಿಯಲ್ ಎಸ್ಟೇಟ್ ಲಾಭಕ್ಕಾಗಿ ಅದನ್ನು ಕನಕಪುರ ಕಡೆಗೆ ಕೊಂಡೊಯ್ಯಲು ಸರ್ಕಾರ ಸಂಚು ರೂಪಿಸುತ್ತಿದೆ.

ಬರ ಪರಿಹಾರದಲ್ಲಿ ವಿಫಲ

ರಾಜ್ಯದ ಜಲಾಶಯಗಳು ಬತ್ತಿ ಹೋಗಿ, ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದರೂ ಮುಖ್ಯಮಂತ್ರಿ ಹಾಗೂ ಸಚಿವರು ಜನರ ಕಷ್ಟ ಕೇಳುವ ಬದಲು ಮಂತ್ರಿಮಂಡಲ ವಿಸ್ತರಣೆಗಾಗಿ ದೆಹಲಿ ವಾರಕ್ಕೆರಡು ಬಾರಿ ಓಡಾಡುತ್ತಿದ್ದಾರೆ.

ಕೇಸುಗಳನ್ನು ಹಿಂಪಡೆಯಲು ಒತ್ತಾಯ

ಪ್ರತಿಭಟನೆ ನಡೆಸಿದ ರೈತರು ಹಾಗೂ ಮಹಿಳೆಯರ ಮೇಲೆ ದರ್ಪದಿಂದ ದಾಖಲಿಸಿರುವ ಸುಳ್ಳು ಮೊಕದ್ದಮೆಗಳನ್ನು ಮುಂದಿನ 24 ಗಂಟೆಗಳಲ್ಲಿ ವಾಪಸ್ ಪಡೆಯಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಪ್ರಥಮ ಬಾರಿಗೆ ಅಂತರರಾಷ್ಟ್ರೀಯ ಯುವಜನೋತ್ಸವ ಆಯೋಜನೆ
Next: GBA ಚುನಾವಣೆ ಮುಂದೂಡುವಿಕೆಯಲ್ಲಿ ರಾಜ್ಯ ಸರಕಾರದ ಷಡ್ಯಂತ್ರ: ಬಿವೈವಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.