ಬೆಂಗಳೂರು: ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ವರ್ಧಂತಿ ಅಂಗವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರ ಸಂಜಯನಗರದ ನಿವಾಸದಲ್ಲಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸ್ವಾಮೀಜಿ ಅವರ ಸಮಾಜಮುಖಿ ಸೇವೆ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶವನ್ನು ಸ್ಮರಿಸಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರ ಧರ್ಮಪತ್ನಿ ಶ್ರೀಮತಿ ನಾಗರತ್ನಮ್ಮ, ಮಾಜಿ ಸಂಸದ ಚಂದ್ರಪ್ಪ ಹಾಗೂ ಸಚಿವರ ಆಪ್ತ ಕಾರ್ಯದರ್ಶಿ ಡಾ. ನಟರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
