ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗದ ಶ್ರೀ ಸಿದ್ಧರಾಮೇಶ್ವರ ಭೋವಿ ಗುರುಪೀಠಕ್ಕೆ ಭೇಟಿ ನೀಡಿ, ರಾಜ್ಯದ ವಿವಿಧ ಮಠಾಧೀಶರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಭಗೀರಥ ಮಠದ ಶ್ರೀ ಪುರುಷೋತ್ತಮನಂದಪುರಿ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹಾಗೂ ಶ್ರೀ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಸೇರಿದಂತೆ ರಾಜ್ಯದವಿವಿಧ ಮಠಗಳ ಮಠಾಧೀಶರು ಉಪಸ್ಥಿತರಿದ್ದರು.
