Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಯತೀಂದ್ರ
  • Politics
  • State
  • ಬೆಳಗಾವಿ

ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿ: ಯತೀಂದ್ರ

Praja Vahini July 28, 2026 1 minute read
WhatsApp Image 2026-07-28 at 16.56.31
Spread the love

ಬೆಳಗಾವಿ: ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ವಿವಿಧ ನಗರಾಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಯಾವುದೇ ಕಾಮಗಾರಿಗಳು ಅನಗತ್ಯವಾಗಿ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಸಾರ್ವಜನಿಕ ಶೌಚಾಲಯಗಳು ದಿನದ ಎಲ್ಲ ಸಮಯದಲ್ಲೂ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಅವುಗಳ ಸ್ವಚ್ಛತೆ, ನೈರ್ಮಲ್ಯ ಹಾಗೂ ನಿರ್ವಹಣೆಗೆ ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರದ ಕನ್ನಡ ಪರ ನಿಲುವಿಗೆ ಅನುಗುಣವಾಗಿ, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕನ್ನಡ ನಾಮಫಲಕಗಳ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಉಲ್ಲಂಘನೆ ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನಗರದಲ್ಲಿ ಬಾಕಿ ಉಳಿದಿರುವ ಹಳೆಯ ಘನತ್ಯಾಜ್ಯ (Legacy Waste) ನಿರ್ವಹಣೆಯನ್ನು ತ್ವರಿತಗೊಳಿಸಿ ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಹಾಳಾಗಿರುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಸಾಂಸ್ಕೃತಿಕ ಚಿಂತಕ ರಾಜಾ ಮದನಗೋಪಾಲ ನಾಯಕ – ಪ್ರಕಾಶ್ ದೊರೆ

ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದೊಂದಿಗೆ ಬೆಳಗಾವಿಯನ್ನು ಮಾದರಿ ನಗರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಸಾಂಸ್ಕೃತಿಕ ಚಿಂತಕ ರಾಜಾ ಮದನಗೋಪಾಲ ನಾಯಕ – ಪ್ರಕಾಶ್ ದೊರೆ
Next: ಬೆಸ್ಕಾಂ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ ಕೃಷ್ಣ ಬೈರೇಗೌಡ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.