ಬೆಂಗಳೂರು: ಅಂತೂ ಇಂತೂ ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಇಂದು (ಸೋಮವಾರ ಆ.03) ಒಂದು ಅರ್ಥಪೂರ್ಣವಾದ ಮಹತ್ವ ಸಿಕ್ಕಿದ್ದು 20 ಜನ ಶಾಸಕರು ಅಧಿಕೃತವಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನು ಕೆಲವರು ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ರಾಜೀನಾಮೆ ಕೂಡ ಘೋಷಣೆ ಮಾಡಿದ್ದಾರೆ. ಇದು ಯಾವುದನ್ನು ಲೆಕ್ಕಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ಸಚಿವರಿಗೆ ಪ್ರಮಾಣವಚನ ಸ್ವೀಕಾರವನ್ನು ನೆರವೇರಿಸಿದ್ದಾರೆ.
ಹೌದು, ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ವಿಧಾನಸಭಾ ಸ್ಪೀಕರ್ ಆಗಿ ಜಿಎಸ್ ಪಾಟೀಲ್, ಉಪ ಸ್ಪೀಕರ್ ಆಗಿ ಎಸ್ ಪೊನ್ನಣ್ಣ ಆಯ್ಕೆಯಾಗಿದ್ದಾರೆ. ಪರಿಷತ್ ಸ್ಪೀಕರ್ ಅಗಿ ಸಲೀಂ ಅಹ್ಮದ್, ಉಪ ಸ್ಪೀಕರ್ ಆಗಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ವಿಧಾನಸಭೆಯ ಸ್ಪೀಕರ್ ರೇಸ್ನಲ್ಲಿ ದಿನೇಶ್ ಗುಂಡೂರಾವ್, ಟಿಬಿ ಜಯಚಂದ್ರ, ಆರ್ವಿ ದೇಶಪಾಂಡೆ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಹೈಕಮಾಂಡ್ ಜಿಎಸ್ ಪಾಟೀಲ್ ಅವರಿಗೆ ಮಣೆ ಹಾಕಿದೆ. ಇದನ್ನೂ ಓದಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಾಮಾಜಿಕ ನ್ಯಾಯದ ಹಾದಿಯಲ್ಲಿ ಐತಿಹಾಸಿಕ ಮೈಲಿಗಲ್ಲು
ಇನ್ನು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ನೂತನವಾಗಿ ಆಯ್ಕೆಯಾಗಿರುವ ಸಚಿವರು ಪಿಎಂ ನರೇಂದ್ರಸ್ವಾಮಿ, ಶಿವರಾಜ ತಂಗಡಗಿ, ರುದ್ರಪ್ಪ ಲಮಾಣಿ, ಕೆಎಸ್ ಬಸವಂತಪ್ಪ, ಬಿ ನಾಗೇಂದ್ರ, ಟಿ ರಘುಮೂರ್ತಿ, ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಅಜಯ್ ಸಿಂಗ್, ಚಲುವರಾಯಸ್ವಾಮಿ, ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
