Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಲ್ಲಾ ಪಟೇಲ್‌ರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ
  • Politics
  • State
  • ಶಹಾಪುರ

ಅಲ್ಲಾ ಪಟೇಲ್‌ರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ

Praja Vahini August 6, 2026
WhatsApp Image 2026-08-06 at 17.41.14
Spread the love

ಶಹಾಪುರ: ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಆ.೩೧ ರೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಅಧ್ಯಕ್ಷರನ್ನು ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದು, ಪಕ್ಷದ ಪ್ರಾಮಾಣಿಕ, ನಿಷ್ಠಾವಂತ ಕಾರ್ಯಕರ್ತರಾಗಿ ಸುಮಾರು    ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಅಲ್ಲಾ ಪಟೇಲ್ ಮಕ್ತಾಪುರ ಅವರಿಗೆ ಕಾಂಗ್ರೆಸ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಯೂತ್ ಕಾಂಗ್ರೆಸ್‌ನ ಉಪಾಧ್ಯಕ್ಷ ಅಜೀಮ್ ಜಮಾದಾರ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿ ಕಾರ್ಯಶೈಲಿ, ಪಕ್ಷ ನಿಷ್ಠೇ ಮತ್ತು ದಕ್ಷತೆಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುಮಾರು ಮೂರು ವರ್ಷಗಳ ಸುಧೀರ್ಘ ಅವಧಿಯಲ್ಲಿ ಪಕ್ಷಕ್ಕಾಗಿ ದುಡಿದಿದ್ದಾರೆ. ಮತ್ತು ನಿರಂತರವಾಗಿ ದುಡಿಯುತ್ತಿದ್ದಾರೆ. ಯಾವುದೇ ಚುನಾವಣೆ ಇರಲಿ ಅಭ್ಯರ್ಥಿಗಳ ಬೆನ್ನಲುಬಾಗಿ ನಿಂತು ನಿರಂತರ ದುಡಿದು ಪಕ್ಷದ ಪರ ಪ್ರಚಾರ ಮಾಡಿದ್ದಾರೆ. ಸಂಘಟಿತ ಪ್ರಯತ್ನದಿಂದ ಪಕ್ಷಕ್ಕೆ ಹೆಚ್ಚಿನ ಬಲ ತುಂಬಿದ್ದಾರೆ.

ಅಲ್ಪಸಂಖ್ಯಾತರ ತಾಲೂಕ ಅಧ್ಯಕ್ಷರಾಗಿ ಸುಮಾರು ೫ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಾಕಷ್ಟು ಅನುಭವುಳ್ಳವರಾಗಿದ್ದು, ಪಕ್ಷ ನಿಷ್ಠರು, ಪ್ರಮಾಣಿಕ ಕೆಲಸ ಮಾಡುವವರನ್ನು ಕಾಂಗ್ರೆಸ್ ಪಕ್ಷ ಸದಾ ಗುರುತಿಸಿ ಸ್ಥಾನಮಾನ ನೀಡುತ್ತಾ ಬಂದಿದ್ದು, ಇದೀಗ ಅಲ್ಪಸಂಖ್ಯಾತರಿಗೂ ಹೆಚ್ಚಿನ ನಿಷ್ಠಾವಂತ ಕಾರ್ಯಕರ್ತರಿಗೆ ಪ್ರಾತಿನಿಧ್ಯ ಸಿಗಬೇಕು. ಅಲ್ಪಸಂಖ್ಯಾತರಿಗಾಗಿ ಯಾವುದೇ ನಿಗಮಗಳಿಲ್ಲಾ, ಎಂಎಲ್‌ಸಿಗಳಿಗೆ, ಎಲ್ಲಿಯೂ ರಾಜಕೀಯವಾಗಿ ಸೂಕ್ತ ಸ್ಥಾನಮಾನಗಳು ಸಿಗುತ್ತಿಲ್ಲಾ. ಇದನ್ನೂ ಓದಿ: ನೆಲಮಂಗಲ ತಾಲ್ಲೂಕಿನ ಬರ ಪರಿಸ್ಥಿತಿ ವೀಕ್ಷಣೆ

ಈ ಕುರಿತು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಸಹ ಕಾಳಜಿ ವಹಿಸಿ ಅಲ್ಪಸಂಖ್ಯಾತರಿಗೆ ಸ್ಥಾನಮಾನಗಳನ್ನು ಕೊಡಿಸಬೇಕು. ಇಷ್ಠೇ ಅಲ್ಲದೇ ಪಕ್ಷಕ್ಕಾಗಿ ನೆಲ ಮಟ್ಟದಲ್ಲಿ ಶ್ರಮಿಸುವ ಕೇವಲ ಶಿಪಾರಸುಗಳ ಬದಲಾಗಿ ನಿಜವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು ಅಂತವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದರೆ ಪಕ್ಷವು ಮುಂದಿನ ದಿನಗಳಲ್ಲಿ ಗಟ್ಟಿಯಾಗಿರಲು ಸಾಧ್ಯ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ವ್ರತವಾಗಿರಿಸಿಕೊಂಡು, ಪಕ್ಷಕೊಟ್ಟ ಗುರುತರ ಹೊಣೆಗಳನ್ನು ಸರಿಯಾಗಿ ನಿಭಾಯಿಸಿದ್ದಾರೆ. ಆದ್ದರಿಂದ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ನೆಲಮಂಗಲ ತಾಲ್ಲೂಕಿನ ಬರ ಪರಿಸ್ಥಿತಿ ವೀಕ್ಷಣೆ
Next: ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ

Views:

200

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.