Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆ: 23 ಸಚಿವರಿಗೆ ಖಾತೆ ಹಂಚಿಕೆ – ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ
  • Bangalore
  • Politics
  • State

ಕರ್ನಾಟಕ ಸಚಿವ ಸಂಪುಟ ಪುನರ್‌ರಚನೆ: 23 ಸಚಿವರಿಗೆ ಖಾತೆ ಹಂಚಿಕೆ – ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ

Praja Vahini August 12, 2026 1 minute read
Cabinet
Spread the love

ಬೆಂಗಳೂರು: ಮುಖ್ಯಮಂತ್ರಿ ಡಿ.ಕಿ. ಶಿವಕುಮಾರ್ ಅವರ ಸಲಹೆಯಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಂಪುಟ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಆದೇಶಿಸಿದ್ದಾರೆ. ಆಗಳಷ್ಟೇ ಬಿಡುಗಡೆಯಾದ ರಾಜಭವನದ ಪತ್ರಿಕಾ ಪ್ರಕಟಣೆಯ ಪ್ರಕಾರ ಖಾತೆಗಳ ಹಂಚಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಮುಖ್ಯಮಂತ್ರಿ ಡಿ.ಕಿ. ಶಿವಕುಮಾರ್ ಅವರು ಹಣಕಾಸು ಖಾತೆಯೊಂದಿಗೆ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಕೃಷಿ ಮಾರಾಟ ಸೇರಿದಂತೆ ಹಲವಾರು ಪ್ರಮುಖ ಇಲಾಖೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಸಚಿವರು ಮತ್ತು ಅವರಿಗೆ ಹಂಚಿಕೆಯಾದ ಖಾತೆಗಳ ವಿವರ:

1. ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ): ಹಣಕಾಸು, ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ವಾರ್ತಾ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಕೃಷಿ ಮಾರಾಟ, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ, ಬಿಡಿಎ (ಃಆಂ) ಮತ್ತು ಬಿಎಂಆರ್‌ಡಿಎ (ಃಒಖಆಂ) ವ್ಯಾಪ್ತಿಯ ಎಲ್ಲಾ ನಗರಾಡಳಿತ ಸಂಸ್ಥೆಗಳು ಹಾಗೂ ಹಂಚಿಕೆಯಾಗದ ಇತರ ಎಲ್ಲಾ ಖಾತೆಗಳು.

2. ಬಿ.ಝೆಡ್. ಜಮೀರ್ ಅಹಮದ್ ಖಾನ್: ವಸತಿ.

3. ರಾಮಲಿಂಗಾರೆಡ್ಡಿ: ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ.

4. ಲಕ್ಷ್ಮಣ ಸವದಿ: ಸಹಕಾರ (ಕೃಷಿ ಮಾರಾಟವನ್ನು ಹೊರತುಪಡಿಸಿ).

5. ರುದ್ರಪ್ಪ ಮಾನಪ್ಪ ಲಮಾಣಿ: ಸಕ್ಕರೆ ಮತ್ತು ಜವಳಿ.

6. ಕೆ.ಎಚ್. ಮುನಿಯಪ್ಪ: ಸಮಾಜ ಕಲ್ಯಾಣ.

7. ಶಿವರಾಜ್ ತಂಗಡಗಿ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ.

8. ಯು.ಟಿ. ಖಾದರ್: ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ.

9. ಟಿ. ರಘುಮೂರ್ತಿ: ಪರಿಶಿಷ್ಟ ಪಂಗಡಗಳ (Sಖಿ) ಕಲ್ಯಾಣ.

10. ಡಾ. ಅಜಯ್ ಸಿಂಗ್: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ.

11. ಚೆಲುವರಾಯಸ್ವಾಮಿ: ಬೃಹತ್ ಮತ್ತು ಮಧ್ಯಮ ನೀರಾವರಿ.

12. ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ.

13. ಬಸವರಾಜ ರಾಯರೆಡ್ಡಿ: ಉನ್ನತ ಶಿಕ್ಷಣ.

14. ಶಿವಲಿಂಗೇಗೌಡ: ಅಬಕಾರಿ (ಹಣಕಾಸು ಇಲಾಖೆಯಿಂದ).

15. ಪುಟ್ಟರಂಗಶೆಟ್ಟಿ: ಪಶುಸಂಗೋಪನೆ ಮತ್ತು ರೇಷ್ಮೆ ಕೃಷಿ.

16. ವಿಜಯಾನಂದ ಕಾಶಪ್ಪನವರ್: ಸಣ್ಣ ಪ್ರಮಾಣದ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳು.

17. ಸಂತೋಷ್ ಲಾಡ್: ಕಾರ್ಮಿಕ ಮತ್ತು ಉದ್ಯೋಗ.

18. ಕೆ.ಎಸ್. ಬಸವಂತಪ್ಪ: ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ.

19. ಎಸ್.ಎಸ್. ಮಲ್ಲಿಕಾರ್ಜುನ್: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ.

20. ರಿಜ್ವಾನ್ ಅರ್ಷದ್: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು.

21. ನರೇಂದ್ರ ಸ್ವಾಮಿ: ಕೃಷಿ.

22. ಎಚ್.ಸಿ. ಬಾಲಕೃಷ್ಣ: ಪೌರಾಡಳಿತ.

23. ಬಿ. ನಾಗೇಂದ್ರ: ಯೋಜನೆ ಮತ್ತು ಸಾಂಖ್ಯಿಕ.

ಈ ಖಾತೆ ಹಂಚಿಕೆಯು ಸರ್ಕಾರದ ಕಾರ್ಯವೈಖರಿಯನ್ನು ಸುಗಮಗೊಳಿಸುವ ನಿರೀಕ್ಷೆಯಿದ್ದು, ಆಯಾ ಇಲಾಖಾ ಮುಖ್ಯಸ್ಥರು ಮತ್ತು ಆಡಳಿತ ಕಾರ್ಯದರ್ಶಿಗಳು ಸಂಬAಧಪಟ್ಟ ಉಸ್ತುವಾರಿ ಸಚಿವರೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲಿದ್ದಾರೆ. ಸಚಿವರು ಈಗ ತಮಗೆ ವಹಿಸಲಾದ ಜವಾಬ್ದಾರಿಗಳನ್ನು ವಹಿಸಿಕೊಂಡು ರಾಜ್ಯದಾದ್ಯಂತ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಅಂಡರ್‌ಪಾಸ್‌ ಕಾಮಗಾರಿ ದುರಂತ: ಅಧಿಕಾರಿಗಳ ಮತ್ತು ಗುತ್ತಿಗೆದಾರರು ನಿರ್ಲಕ್ಷ್ಯವೇ ಕಾರಣ: ಕೆ.ಗೋಪಾಲಯ್ಯ
Next: ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ತಿಳಿಸಿದ ಸಿಎಂ ಡಿಕೆಶಿ

Views:

82

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.