ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ. ಶರವಣ ಅವರ ಬೆಂಗಳೂರಿನ ನಿವಾಸದಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ವರಮಹಾಲಕ್ಷ್ಮೀ ದೇವಿಯ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ತಾರಾ ಹಾಗೂ ಅಪೂರ್ವ ಅವರು ಭಾಗವಹಿಸಿ, ಡಾ. ಟಿ.ಎ. ಶರವಣ ಅವರಿಗೆ ಹಾಗೂ ಕುಟುಂಬಸ್ಥರಿಗೆ ಹಬ್ಬದ ಶುಭಾಶಯಗಳನ್ನು ಕೋರಿದರು.
ಪೂಜೆಯ ಬಳಿಕ ನಾಡಿನ ಜನರ ಸುಖ, ಶಾಂತಿ, ಆರೋಗ್ಯ, ಐಶ್ವರ್ಯ ಹಾಗೂ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಗಣ್ಯರು ಆತ್ಮೀಯವಾಗಿ ಮಾತುಕತೆ ನಡೆಸಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಇದನ್ನೂ ಓದಿ: ರಾಜೀವ್ ಗಾಂಧಿ ಅವರು ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಮಂತ್ರಿಗಳಲ್ಲಿ ಒಬ್ಬರಾಗಿದ್ದರು: ಮಾಜಿ ಸಿಎಂ ಸಿದ್ದು
ವರಮಹಾಲಕ್ಷ್ಮೀ ದೇವಿಯ ಕೃಪೆಯಿಂದ ನಾಡಿನ ಪ್ರತಿಯೊಬ್ಬರ ಬದುಕಿನಲ್ಲಿ ಸುಖ-ಶಾಂತಿ, ಆರೋಗ್ಯ, ಐಶ್ವರ್ಯ ಹಾಗೂ ಸಮೃದ್ಧಿ ನೆಲೆಸಲಿ ಎಂದು ಡಾ. ಟಿ.ಎ. ಶರವಣ ಅವರು ಹಾರೈಸಿದರು.
