Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರ ದಲಿತರ ರಕ್ಷಣೆಯಲ್ಲಿ ವಿಫಲವಾಗಿದೆ: ಛಲವಾದಿ ನಾರಾಯಣಸ್ವಾಮಿ
  • Bangalore
  • Politics
  • State

ಸರ್ಕಾರ ದಲಿತರ ರಕ್ಷಣೆಯಲ್ಲಿ ವಿಫಲವಾಗಿದೆ: ಛಲವಾದಿ ನಾರಾಯಣಸ್ವಾಮಿ

Praja Vahini August 22, 2026
WhatsApp Image 2026-08-22 at 18.07.41
Spread the love

ಬೆಂಗಳೂರು: ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ದಲಿತರ ರಕ್ಷಣೆಯಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದಲಿತರ ರಕ್ಷಣೆಗೆ ಈ ಸರ್ಕಾರ ಬಂದಿಲ್ಲ. ದಲಿತರ ಮೇಲೆ ದೌರ್ಜನ್ಯ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿವೆ. ಗೃಹ ಇಲಾಖೆ ಕಣ್ಣು ಮುಚ್ಚಿ ಕುಳಿತಿದೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇವದುರ್ಗದಲ್ಲಿ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಸೇರಿದಂತೆ ಹಲವು ಪ್ರಕರಣಗಳನ್ನು ಪ್ರಸ್ತಾಪಿಸಿದ ಅವರು, ಇಂತಹ ಘಟನೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಸಚಿವ ಕಾಶಪ್ಪನವರ್ ವಿರುದ್ಧವೂ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಕಾಶಪ್ಪನವರ್ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾದರೂ ಇನ್ನೂ ಬಂಧನವಾಗಿಲ್ಲ, ಎಫ್‌ಐಆರ್ ಕೂಡ ದಾಖಲಾಗಿಲ್ಲ ಎಂದು ದೂರಿದರು. ಇದನ್ನೂ ಓದಿ: ವಿರೋಧ ಪಕ್ಷದವರಿಗೆ ನನ್ನನ್ನು ಹಾಗೂ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಸಿಎಂ ಡಿ ಕೆ ಶಿವಕುಮಾರ್

ಈ ವಿಚಾರವನ್ನು ಸದನದಲ್ಲಿಯೂ ಮುಖ್ಯಮಂತ್ರಿ ಸಮ್ಮುಖದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಅವರು ತಿಳಿಸಿದರು.

ಇನ್ನು ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ, ಈ ಕೃತ್ಯವನ್ನು ಬಿಜೆಪಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿ, ಘಟನೆಯನ್ನು ಖಂಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ವಿರೋಧ ಪಕ್ಷದವರಿಗೆ ನನ್ನನ್ನು ಹಾಗೂ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಸಿಎಂ ಡಿ ಕೆ ಶಿವಕುಮಾರ್
Next: ಕುಮಾರಸ್ವಾಮಿಯವರು  ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದನೆ ನೀಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.