Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸೂಕ್ತ ಮಾನದಂಡಗಳ ಪ್ರಕಾರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ: ಟಿ. ರಘುಮೂರ್ತಿ
  • Bangalore
  • Front news
  • Politics
  • State

ಸೂಕ್ತ ಮಾನದಂಡಗಳ ಪ್ರಕಾರ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ: ಟಿ. ರಘುಮೂರ್ತಿ

Praja Vahini August 28, 2026 1 minute read
fa7a3600-0282-49b7-95c5-db90e1fb1b87
Spread the love

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸೂಕ್ತ ಮಾನದಂಡಗಳನ್ನು ಅನುರಿಸಿಯೇ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಟಿ. ರಘುಮೂರ್ತಿ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು, ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ತಾಲೂಕುಗಳಾದ ಚಳ್ಳಕೆರೆ, ಹಿರಿಯೂರು, ಹೊಸದುರ್ಗವನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ ಕೆಲವು ತಾಲೂಕುಗಳು ಸಂಕಷ್ಟ ಎದುರಿಸುತ್ತಿವೆ ಎಂಬ ಮಾಹಿತಿ ಇದೆ. ಆದರೆ ರೈತರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು ತಿಳಿಸಿದ್ದಾರೆ.

ಚಿತ್ರದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ ತಾಲೂಕು ಸೇರಿಸಬೇಕು ಎಂದು ಒತ್ತಾಯಗಳು ಕೇಳಿಬಂದಿವೆ. ಈ ಬಗ್ಗೆ ಸರ್ಕಾರ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ ಎಂದು ರೈತರಿಗೆ ಸಚಿವರು ಭರವಸೆ ನೀಡಿದ್ದಾರೆ.

ಬರ ಘೋಷಣೆ ಮಾನದಂಡಗಳು

ಬರ ಘೋಷಣೆ ಮಾಡುವಾಗ ಸರ್ಕಾರ ಕೆಲವು ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ‘ಬರ ನಿರ್ವಹಣೆ ಕೈಪಿಡಿ – 2020’ ರ ಮಾರ್ಗದರ್ಶಿ ಸೂತ್ರದನ್ವಯ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC), 2026ರ ಜೂನ್ 1 ರಿಂದ ಆಗಸ್ಟ್ 12ರ ಅವಧಿಗೆ ವೈಜ್ಞಾನಿಕ ಬರ ಪರಿಶೀಲನೆ ನಡೆಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಒಟ್ಟು ಮೂರು ಹಂತದಲ್ಲಿ ಅಧ್ಯಯನ ನಡೆಸಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಕಡ್ಡಾಯ ಸೂಚಕಗಳ ಮೌಲ್ಯಮಾಪನ (ASSESSMENT OF MANDATORY INDICATORS) ಮಾಡಲಾಗುತ್ತದೆ. ಮಳೆ ಕೊರತೆ (Rainfall Deviation) ಮತ್ತು ಶುಷ್ಕ ಅವಧಿ (Dry Spell) ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ ಎಂದು ರಘುಮೂರ್ತಿ ವಿವರಿಸಿದ್ದಾರೆ.

ಎರಡನೇ ಹಂತದಲ್ಲಿ ಪ್ರಭಾವ ಸೂಚಕಗಳ ಮೌಲ್ಯಮಾಪನ (ASSESSMENT OF IMPACT INDICATORS) ನಡೆಯುತ್ತದೆ. ಈ ಪೈಕಿ ಬಿತ್ತನೆಯಾದ ಕೃಷಿ ಬೆಳೆಗಳ ಸ್ಥಿತಿ (Crop Sown Status), ಉಪಗ್ರಹ ಆಧಾರಿತ ಸಸ್ಯವರ್ಗದ ಸೂಚ್ಯಂಕ (Satellite-based Vegetation Indices), ಮಣ್ಣಿನ ತೇವಾಂಶ (Soil Moisture) ಜಲವಿಜ್ಞಾನ/ನೆಲದ ನೀರಿನ ಮಟ್ಟ (Hydrology) ಪರಿಶೀಲನೆ ನಡೆಸಿದ ನಂತರ ಸೂಚಕಗಳ ಆಧಾರದ ಮೇಲೆ ಅರ್ಹ ತಾಲೂಕುಗಳನ್ನು ‘ಮಧ್ಯಮ’ (Moderate) ಅಥವಾ ‘ತೀವ್ರ’ (Severe) ಬರ ಪೀಡಿತ ಎಂದು ವರ್ಗೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ನಿರ್ಣಾಯಕ ಹಂತ
‘ಮಧ್ಯಮ’ ಅಥವಾ ‘ತೀವ್ರ’ ಬರ ಪೀಡಿತ ಎಂದು ವರ್ಗೀಕರಿಸಲ್ಪಟ್ಟ ತಾಲೂಕುಗಳನ್ನು ಮೂರನೇ ಹಂತದಲ್ಲಿ ಗ್ರೌಂಡ್ ಟ್ರೂಥಿಂಗ್ ಪರಿಶೀಲನೆಗೆ (GROUND TRUTHING – GT) ಒಳಪಡಿಸಲಾಗುತ್ತದೆ. ಈ ಪರಿಶೀಲನೆಯ ವೇಳೆ ತಳಮಟ್ಟದ ಬರ ಪರಿಣಾಮದ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ. ಇದು ಬರದ ತೀವ್ರತೆಯನ್ನು ನಿರ್ಧರಿಸಲು ನೆರವಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೆಎಸ್‍ಎನ್‌ಡಿಎಂಸಿ ನಡೆಸಿದ ಸಮಗ್ರ ಬರ ಮೌಲ್ಯಮಾಪನದ ಆಧಾರದ ಮೇಲೆ, ಒಟ್ಟು 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇ-ಆಡಳಿತ (DPAR) ಇಲಾಖೆಯ “Crop Loss GT” ಮೊಬೈಲ್ ಆ್ಯಪ್ ಮೂಲಕವೂ ಪರಿಶೀಲನೆ ನಡೆಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜೊತೆ ಸಿಎಂ ವೀಡಿಯೋಕಾಲ್ ಸಂಭಾಷಣೆ
Next: ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಎಂ ಬಿ ಪಾಟೀಲ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.