ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಸಮಗ್ರ ಸಾಮರ್ಥ್ಯ ವೃದ್ಧಿ ತರಬೇತಿ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್, ಎನ್.ಎಸ್.ಜಿ ಡೈರೆಕ್ಟರ್ ಜನರಲ್ ಭೃಗು ಶ್ರೀನಿವಾಸನ್, ಡಿಜಿ-ಐಜಿಪಿ ಎಂ. ಎ. ಸಲೀಂ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಚಂದ್ರಶೇಖರ್, ಆಪ್ಸ್ ಐಜಿಪಿ ವಿಕಾಶ್ ಕುಮಾರ್ ವಿಕಾಶ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ತರಬೇತಿ ಉದ್ಘಾಟನೆ ಬಳಿಕ, ರಾಜ್ಯದಲ್ಲಿ ಹಠಾತ್ ಎದುರಾಗಬಹುದಾದ ತುರ್ತು ಪರಿಸ್ಥಿತಿಗಳು, ಅಹಿತಕರ ಘಟನೆಗಳು ಹಾಗೂ ಭಯೋತ್ಪಾದಕ ದಾಳಿಗಳ ಸಂದರ್ಭದಲ್ಲಿ ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗುವ ತುರ್ತು ಸ್ಪಂದನಾ ಪಡೆ (Emergency Response Team) ನಡೆಸಿದ ಅಣಕು ಕಾರ್ಯಾಚರಣೆಯನ್ನು (Mock Drill) ಮುಖ್ಯಮಂತ್ರಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
