ಬೆಂಗಳೂರು: ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಯ ತ್ಯಾಗ ಮತ್ತು ಸೇವೆ ಅತ್ಯಂತ ಸ್ಮರಣೀಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ವೇಳೆ ಅರಣ್ಯ ರಕ್ಷಣೆಯ ಕಾರ್ಯದಲ್ಲಿ ಹುತಾತ್ಮರಾದ ಸಿಬ್ಬಂದಿಯ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಅರಣ್ಯ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಮೀನಾಕ್ಷಿ ನೇಗಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
